newsics.com
ಕಾಠ್ಮಂಡು: ಇದು ಕಾಕತಾಳೀಯವೊ ಅಥವಾ ನಂಬಿಕೆಯೊ ಗೊತ್ತಿಲ್ಲ. ಚಂದ್ರಗ್ರಹಣ ಮುಗಿದ ಕೆಲವೇ ಗಂಟೆಗಳಲ್ಲಿ ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.3ರಷ್ಟು ದಾಖಲಾಗಿದೆ.
ನೇಪಾಳದ ಡೋಟಿ ಜಿಲ್ಲೆಯಲ್ಲಿ ಭಾರತೀಯ ಕಾಲಮಾನ ರಾತ್ರಿ 1.12ಕ್ಕೆ ಭೂಮಿ ಕಂಪಿಸಿದೆ. ಭೂಕಂಪನದಿಂದ ಹಲವು ಮನೆಗಳು ಕುಸಿದು ಬಿದ್ದಿವೆ. ಇದುವರೆಗೆ ಭೂಕಂಪನದಿಂದ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ರಕ್ಷಣಾ ಕಾರ್ಯಾಚರಣೆಗೆ ಸೇನೆಯ ನೆರವು ಪಡೆಯಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿಮೂಡಿದೆ