ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಅವರನ್ನು ಇದೀಗ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿದೆ. ಸಿದ್ದರಾಮಯ್ಯ ಅವರು ಸ್ವಲ್ಪ ಜ್ವರದಿಂದ ಬಳಲುತ್ತಿದ್ದಾರೆ. ಸಿದ್ದರಾಮಯ್ಯ ಅವರ ಪುತ್ರ ಹಾಗೂ ಶಾಸಕ ಡಾ. ಯತೀಂದ್ರ ಅವರು ಸಾಮಾಜಿಕ ಜಾಲತಾಣದ ಮೂಲಕ ಇದನ್ನು ದೃಢೀಕರಿಸಿದ್ದಾರೆ.
ಮೈಸೂರು ಸೇರಿ ದೇಶದ 17 ಕಡೆ 1600 ಮಂದಿ ಮೇಲೆ ಆಕ್ಸ್ಫರ್ಡ್ ವಿವಿ ಲಸಿಕೆ ಪ್ರಯೋಗ
ಸೋಮವಾರ ಬೆಳಿಗ್ಗೆ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿತ್ತು. ಬಳಿಕ ರಾತ್ರಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರ ಪುತ್ರ ಡಾ. ಯತೀಂದ್ರ ತಿಳಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ