newsics.com
ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಪ್ರಮುಖ ಶೂಟರ್ಗಳನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಶೂಟರ್ಗಳನ್ನು ಪ್ರಿಯವ್ರತ್ ಫೌಜಿ (26) ಮತ್ತು ಕಾಶಿಶ್ (24) ಎಂದು ಗುರುತಿಸಲಾಗಿದೆ. ಪೊಲೀಸರು ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.
ಶಾರ್ಪ್ ಶೂಟರ್ಗಳನ್ನು ಗುಜರಾತ್ನ ಮುಂದ್ರಾದಲ್ಲಿ ಬಂಧಿಸಲಾಗಿದೆ. ಆರೋಪಿಗಳಿಂದ ಎಂಟು ಗ್ರೆನೇಡ್ಗಳು, ಒಂಬತ್ತು ಎಲೆಕ್ಟ್ರಿಕ್ ಡಿಟೋನೇಟರ್ಗಳು, ಮೂರು ಪಿಸ್ತೂಲ್ಗಳು ಮತ್ತು ಒಂದು ಅಸಾಲ್ಟ್ ರೈಫಲ್ ವಶಪಡಿಸಿಕೊಳ್ಳಲಾಗಿದೆ.