Saturday, April 17, 2021

ಕೊರೋನಾ ಸೋಂಕಿತರಿಗೆ ಆಹಾರ, ಔಷಧ ನೀಡಲು ಸ್ಮಾರ್ಟ್ ರೊಬೋಟ್ ರೆಡಿ!

ಮುಂಬೈ: ಒಂದೆಡೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಕೊರೋನಾ ಚಿಕಿತ್ಸೆ ವಿಧಾನಗಳನ್ನು ಅಭಿವೃದ್ಧಿಪಡಿಸುವ ಪ್ರಯತ್ನವೂ ನಡೆದಿದೆ.
ಮಹಾರಾಷ್ಟ್ರದ ವಿದ್ಯಾರ್ಥಿಯೊಬ್ಬ ಕೊರೋನಾ ಸೋಂಕಿತರಿಗೆ ಮಾನವರಹಿತವಾಗಿ ಆಹಾರ ಹಾಗೂ ಔಷಧ ನೀಡಲು ಸಹಾಯವಾಗುವಂತ ರೊಬೋಟ್ ಅಭಿವೃದ್ಧಿಪಡಿಸಿದ್ದಾನೆ.
ಮಹಾರಾಷ್ಟ್ರದ ಏಳನೇ ತರಗತಿಯ ವಿದ್ಯಾರ್ಥಿ ಸಾಯಿ ಸುರೇಶ್ ರಂಗ್ದಲ್ ಎಂಬ ವಿದ್ಯಾರ್ಥಿ ಈ ರೊಬೋಟ್ ಸಿದ್ಧಪಡಿಸಿದ್ದು, ಈ ರೊಬೋಟ್ ನ್ನು ಸ್ಮಾರ್ಟ್ ಪೋನ್ ಮೂಲಕ ನಿರ್ವಹಿಸಬಹುದಾಗಿದೆ.
ರೊಬೋಟ್ ಒಂದು ಬಾರಿಗೆ 1 ಕೆಜಿ ತೂಕದ ವಸ್ತುಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಈ ವಿದ್ಯಾರ್ಥಿಯ ಪ್ರಯತ್ನಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
ಈ ರೊಬೋಟ್ ಕುರಿತು ವಿವರಣೆ ನೀಡಿರುವ ಸಾಯಿ, ಕೊರೋನಾಪೀಡಿತರಿಗೆ ಚಿಕಿತ್ಸೆ ನೀಡುವ ವೇಳೆ ಇತರರಿಗೆ ಸೋಂಕು ತಗಲುವ ಪ್ರಮಾಣ ಹೆಚ್ಚುತ್ತಿದೆ. ಹೀಗಾಗಿ ಕೊರೋನಾ ಸೋಂಕಿತರೊಂದಿಗೆ ನೇರ ಸಂಪರ್ಕ ತಪ್ಪಿಸುವ ಉದ್ದೇಶದಿಂದ ಈ ರೊಬೋಟ್ ಸಿದ್ಧಪಡಿಸಿದ್ದೇನೆ ಎಂದಿದ್ದಾನೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!