ಲಖ್ನೋ: ದೇಶದ ಅತ್ಯಂತ ಪ್ರಮುಖ ಪ್ರಕರಣಗಳಲ್ಲಿ ಒಂದಾಗಿರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಸ್‍ಕೆ ಯಾದವ್ ಸಪ್ಟೆಂಬರ್ 30 ರಂದು ತೀರ್ಫು ಪ್ರಕಟಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಿದೆ. ಈ ಪ್ರಕರಣದಲ್ಲಿ ಒಟ್ಟು 32 ಆರೋಪಿಗಳಿದ್ದು, ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ,ಬಿಜೆಪಿ ಮುಖಂಡ ಮುರುಳಿ ಮನೋಹರ ಜೋಷಿ,ಕಲ್ಯಾಣ್ ಸಿಂಗ್,ಉಮಾ ಭಾರತಿ,ವಿನಯ ಕತಿಯಾರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಈ ಪ್ರಕರಣದಲ್ಲಿ ಆರೋಪಿತರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಭಾರಿ ವಿಡಿಯೋ ಕಾನ್ಪರೆನ್ಸ್‍ನಲ್ಲಿ ವಿಚಾರಣೆ ಕೂಡ ಎದುರಿಸಿದ್ದರು.
ಸಿಬಿಐನ ಕೌನ್ಸಿಲ್ ಲಲಿತ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ನ್ಯಾಯಾಲಯ ಸಪ್ಟೆಂಬರ್ 1 ರವರೆಗೆ ವಾದ ಹಾಗೂ ಪ್ರತಿವಾದ ಆಲಿಸಿದ್ದು, ಆ ಬಳಿಕ ನ್ಯಾಯಮೂರ್ತಿಗಳು ತೀರ್ಪು ಬರೆಯಲು ಆರಂಭಿಸಿದ್ದಾರೆ. ಇದುವರೆಗೂ ಪ್ರಕರಣಕ್ಕೆ ಸಂಬಂಧಿಸಿದಂತೆ 351 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಲಾಗಿದ್ದು, 600 ಕ್ಕೂ ಅಧಿಕ ದಾಖಲೆಗಳನ್ನು ಸಾಕ್ಷಿಯಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದಿದ್ದಾರೆ. ಸಮಗ್ರ ವಿಚಾರಣೆ ಬಳಿಕ ಸಪ್ಟೆಂಬರ್ 30 ರಂದು ತೀರ್ಫು ಹೊರಬೀಳಲಿದ್ದು ದೇಶದಲ್ಲಿ ಕುತೂಹಲ ಮನೆಮಾಡಿದೆ. 1992 ರ ಡಿಸೆಂಬರ್ 6 ರಂದು ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಲಾಗಿತ್ತು.
ಸೆ.30ಕ್ಕೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು
Follow Us