ಜೂನ್ ಎರಡನೇ ಅಥವಾ ಮೂರನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸರ್ಕಾರ ಚಿಂತನೆ

ಬೆಂಗಳೂರು: ಜೂನ್ ಎರಡನೇ ಅಥವಾ ಮೂರನೇ ವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಚಿಂತನೆ ಇದೆ. ಈ ಬಗ್ಗೆ ಈಗಾಗಲೇ ಸಿದ್ಧತೆ ಆರಂಭ ಮಾಡಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್  ತಿಳಿಸಿದ್ದಾರೆ.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಶಿಕ್ಷಣ ಇಲಾಖೆ ಘೋಷಣೆ ಮಾಡುವ ವೇಳಾಪಟ್ಟಿ ನಿಖರವಾಗಿರಲಿದೆ. ವೇಳಾಪಟ್ಟಿ ಘೋಷಣೆ ಮಾಡಿದ ಮೇಲೆ ಕನಿಷ್ಠ 15 ರಿಂದ 20 ದಿನ ವಿದ್ಯಾರ್ಥಿಗಳಿಗೆ ಸಿದ್ಧತೆ ಮಾಡಿಕೊಳ್ಳಲು ಸಮಯ ಸಿಗುತ್ತದೆ ಎಂದು ಸುರೇಶ್ ಕುಮಾರ್ ಹೇಳಿದರು.
ಪರೀಕ್ಷಾರ್ಥಿಗಳು ಊರಿಗೆ ಹೋಗಿದ್ದಲ್ಲಿ‌ ಅದೇ ಊರಿನ ಹತ್ತಿರದ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದೂ ತಿಳಿಸಿದರು.
ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಕಡ್ಡಾಯವಾಗಿರುತ್ತದೆ. ಪರೀಕ್ಷೆ ಬರೆಯುವಾಗ ಮಾಸ್ಕ್ ಧರಿಸುವುದು ಕಡ್ಡಾಯ. ಪರೀಕ್ಷೆಗೂ ಮುನ್ನ ಸ್ಯಾನಿಟೈಸರ್ ಬಳಕೆ ಮಾಡುವುದು ಕಡ್ಡಾಯ. ಎಲ್ಲಾ ವಿದ್ಯಾರ್ಥಿಗಳಿಗೆ ಥರ್ಮರ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಲಾಗುತ್ತೆ. ಪರೀಕ್ಷೆ ಮುನ್ನ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲಾಗುತ್ತದೆ. ಇದಕ್ಕೆ ನಮ್ಮ ಇಲಾಖೆ ಸಿದ್ಧವಾಗುತ್ತಿದೆ ಎಂದು ಸುರೇಶ್ ಕುಮಾರ್ ವಿವರಿಸಿದರು.

LEAVE A REPLY

Please enter your comment!
Please enter your name here

Read More

ಶುಭದಾತೆ ಕಾಳರಾತ್ರಿ…

ರೂಪದಲ್ಲಿ ಭಯಂಕರವೆನಿಸಿದರೂ ಜಗನ್ಮಾತೆ ದುರ್ಗೆಯ ಏಳನೇ ಶಕ್ತಿ ಕಾಳರಾತ್ರಿ ಆರಾಧಕನಿಗೆ ಶುಭವನ್ನೇ ನೀಡುವವಳು. ಇದೇ ಕಾರಣಕ್ಕೆ ಇವಳು ಶುಭಂಕರಿ. ಕೈಗಳಲ್ಲಿ ವರಮುದ್ರೆ ಇಂದ ಎಲ್ಲರಿಗೆ ವರದಾನ ನೀಡುತ್ತಾ, ಅಭಯ ಮುದ್ರೆ,...

ಹರೀರಿ ಮತ್ತೆ ಲೆಬನಾನ್ ಪ್ರಧಾನಿ

newsics.comಬೈರೂತ್ (ಲೆಬನಾನ್): ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ...

ಕೋವ್ಯಾಕ್ಸಿನ್ 3ನೇ ಹಂತದ ಪ್ರಯೋಗ ಯಶಸ್ವಿ

newsics.comನವದೆಹಲಿ: ಕೊರೋನಾ ಲಸಿಕೆ ಕೋವ್ಯಾಕ್ಸಿನ್ ನ ಮೂರನೇ ಹಂತದ ಪ್ರಯೋಗವೂ ಯಶಸ್ವಿಯಾಗಿದೆ.ಭಾರತ್ ಬಯೋಟೆಕ್ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಜಂಟಿಯಾಗಿ ಈ ಲಸಿಕೆ ಅಭಿವೃದ್ಧಿಪಡಿಸುತ್ತಿವೆ. ಹೈದರಾಬಾದ್...

Recent

error: Content is protected !!