Sunday, December 5, 2021

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ

Follow Us

 ಬೆಂಗಳೂರು; ಕೊರೋನಾ ವೈರಸ್ ಸೋಂಕು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಮಾ. 27ರಿಂದ ನಿಗದಿಯಾಗಿದ್ದ ಎಸ್.ಎಸ್.ಎಲ್ ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. 
ಇಂದು ಬೆಳಗ್ಗೆ  ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹಾಗೂ ಡಾ.ದೇವಿಪ್ರಸಾದ್ ಅವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ತೀರ್ಮಾನ ಕೈಗೊಂಡಿದ್ದಾರೆ. 

ಇದರ ಜತೆಗೆ, ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. 

ಏಪ್ರಿಲ್ ಮೊದಲ‌ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಸಿಎಂ ಹೇಳಿದರು.
ನಂತರ, ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ,.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!