ಮೈಸೂರು: ಜೂನ್ 25 ರಿಂದ ಆರಂಭವಾಗಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಮೈಸೂರಿನಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರಾಗಿದ್ದಾರೆ.
1,803 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿಲ್ಲ. ಮೈಸೂರಿನ 139 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 37,738 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿತ್ತು. ಈ ಪೈಕಿ 35,935 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಗೈರಾದ ಬಹುತೇಕ ವಿದ್ಯಾರ್ಥಿಗಳಿಗೆ ಹಾಜರಾತಿ ಕಡಿಮೆಯಿದ್ದು, ಹಾಲ್ ಟಿಕೆಟ್ ಸಿಗದ ಕಾರಣ ಪರೀಕ್ಷೆಗೆ ಗೈರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಂಟೈನ್ಮೆಂಟ್ ವಲಯದಿಂದ ಬಂದ 40 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗಿದೆ. ಎಲ್ಲ ರೀತಿಯ ಸುರಕ್ಷತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದ 4 ವಿದ್ಯಾರ್ಥಿಗಳಿಗೂ ಬೇರೆ ಕೊಠಡಿಯಲ್ಲಿ ಪರೀಕ್ಷೆಗೆ ಅವಕಾಶ ನೀಡಲಾಗಿತ್ತು.