Monday, October 2, 2023

ಎಸ್ಸೆಸ್ಸೆಲ್ಸಿ ಫಲಿತಾಂಶ: ಬೆಂಗಳೂರು ಉತ್ತರ ಪ್ರಥಮ, ಬಳ್ಳಾರಿ ಲಾಸ್ಟ್

Follow Us

ಬೆಂಗಳೂರು: 2020-21ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಸೋಮವಾರ (ಆ.9)ಪ್ರಕಟವಾಗಿದ್ದು, ಜಿಲ್ಲಾವಾರು ಫಲಿತಾಂಶ ಬಹುತೇಕ ಸಮಾನವಾಗಿವೆ. ಆದರೂ ಸಂಖ್ಯೆಯನ್ನು ಪರಿಗಣಿಸುವುದಾದರೆ ಬೆಂಗಳೂರು ಉತ್ತರ ಪ್ರಥಮ ಸ್ಥಾನ, ಬೆಂಗಳೂರು ದಕ್ಷಿಣ ದ್ವಿತೀಯ ಹಾಗೂ ರಾಮನಗರಕ್ಕೆ ತೃತೀಯ ಸ್ಥಾನ ಲಭಿಸಿದೆ.

ನಂತರದ ಸ್ಥಾನಗಳಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮದುಗಿರಿ, ತುಮಕೂರು, ಚಾಮರಾಜನಗರ, ಮೈಸೂರು, ಮಂಡ್ಯ, ಉಡುಪಿ, ಮಂಗಳೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಹಾವೇರಿ, ಗದಗ, ಧಾರವಾಡ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಶಿರಸಿ, ಉತ್ತರ ಕನ್ನಡ, ಯಾದಗಿರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬೀದರ್ ಜಿಲ್ಲೆಗಳಿವೆ. ಬಳ್ಳಾರಿ ಕೊನೆಯ ಸ್ಥಾನದಲ್ಲಿದೆ‌.

ಬೇರೆಯವರಿಂದ ಪರೀಕ್ಷೆ ಬರೆಸಿ ಡಿಬಾರ್ ಆಗಿದ್ದ ಓರ್ವ ವಿದ್ಯಾರ್ಥಿ ಹೊರತುಪಡಿಸಿ ಪರೀಕ್ಷೆಗೆ ಹಾಜರಾದವರೆಲ್ಲರೂ ಉತ್ತೀರ್ಣರಾಗಿದ್ದಾರೆ.

ಕಳೆದ ಜುಲೈ 29 ಮತ್ತು 31ರಂದು ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 8.71 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, ಶೇ. 99.9 ಮಕ್ಕಳು ಪಾಸ್ ಆಗಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ಸರ್ಕಾರ ಹೇಳಿತ್ತು. ಆದರೆ, ಪರೀಕ್ಷೆಯಲ್ಲಿ ಓರ್ವ ವಿದ್ಯಾರ್ಥಿ ಡಿಬಾರ್ ಆಗಿದ್ದ ಹಿನ್ನೆಲೆಯಲ್ಲಿ ಶೇ.100 ಫಲಿತಾಂಶ ಬಂದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದ್ದಾರೆ.

4,70,160 SSLC ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, 4,01,280 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ.

* ಪ್ರಥಮ ಭಾಷೆ ಕನ್ನಡದಲ್ಲಿ 25,702 ವಿದ್ಯಾರ್ಥಿಗಳು 125ಕ್ಕೆ 125 ಅಂಕ ಪಡೆದಿದ್ದಾರೆ.
* ದ್ವಿತೀಯ ಭಾಷೆ ಇಂಗ್ಲಿಷ್ ನಲ್ಲಿ 36,628 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದುಕೊಂಡಿದ್ದಾರೆ.
* ಹಿಂದಿ ಪರೀಕ್ಷೆಯಲ್ಲಿ 36,776 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ.
* ಗಣಿತದಲ್ಲಿ 100ಕ್ಕೆ ನೂರು ಅಂಕವನ್ನು 6321 ವಿದ್ಯಾರ್ಥಿಗಳು ಪಡೆದಿದ್ದಾರೆ.
* ವಿಜ್ಞಾನ- 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆ 3649
* ಸಮಾಜ ವಿಜ್ಞಾನದಲ್ಲಿ 9367 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ.

2021 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಶೇ. 99.9 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಆ. 23ರಿಂದ 9-12ನೇ ತರಗತಿ ಆರಂಭ – ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್...

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರ ಮೆಕ್ಸಿಕೋದಲ್ಲಿ...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...
- Advertisement -
error: Content is protected !!