newsics.com
ಶ್ರೀಹರಿಕೋಟಾ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ವೇಳೆ ಇಸ್ರೋ ತನ್ನ ಸಾಧನೆ ಮುಂದುವರಿಸಿದೆ. ಇಂದು ಮುಂಜಾನೆ ಎಸ್ ಎಸ್ ಎಲ್ ವಿ- ಡಿ ಒನ್ ಉಪಗ್ರಹದ ಯಶಸ್ವಿ ಉಡಾವಣೆ ಮಾಡಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಈ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಇದು ಭೂ ವೀಕ್ಷಣಾ ಉಪಗ್ರಹವಾಗಿದೆ. ಇಸ್ರೋ ಸಾಧನೆಗೆ ಮೆಚ್ಚುಗೆಯ ಮಹಾ ಪೂರವೇ ಹರಿದು ಬಂದಿದೆ