ಬೆಂಗಳೂರು: ಮಾರ್ಚ್ 2ರಿಂದ ರಾಜ್ಯ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 5ರಂದು 2020-21ನೇ ಸಾಲಿನ ಬಜೆಟ್ ಮಂಡನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಈ ಮಾಹಿತಿಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ನೀಡಿದರು.
ಉಭಯ ಸದನಗಳ ವರ್ಷದ ಮೊದಲ ಅಧಿವೇಶನ 2020ರ ಫೆಬ್ರವರಿ 17 ರಿಂದ 21ರವರೆಗೆ ನಡೆಯಲಿದೆ. ಫೆ.7ರಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದರು.
ಜ.20ರಿಂದ 30ರವರೆಗೆ ಅಧಿವೇಶನ ನಡೆಸಲು ಮೊದಲು ನಿರ್ಧರಿಸಲಾಗಿತ್ತು. ಆದರೆ ಮುಖ್ಯಮಂತ್ರಿ ವಿದೇಶ ಪ್ರವಾಸ ಹಿನ್ನೆಲೆಯಲ್ಲಿ ಫೆ.17ಕ್ಕೆ ಮುಂದೂಡಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.