Sunday, July 3, 2022

ರಾಜ್ಯಾದ್ಯಂತ ವೀಕೆಂಡ್ ಲಾಕ್ ಡೌನ್ ಆರಂಭ

Follow Us

ಬೆಂಗಳೂರು: ರಾಜ್ಯದಲ್ಲಿ ಕೋವಿಡ್​ ಸೋಂಕಿನ ಅಟ್ಟಹಾಸ ಹೆಚ್ಚಾಗುತ್ತಿದ್ದು, ಇಂದು(ಜು.25) ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ರಾಜ್ಯ ವ್ಯಾಪಿ ಲಾಕ್​ಡೌನ್​ ಜಾರಿಯಲ್ಲಿರಲಿದೆ.
ಬೆಂಗಳೂರು ನಗರದಲ್ಲೂ ಶನಿವಾರ ರಾತ್ರಿ 9ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆಯವರೆಗೆ ಲಾಕ್‌ಡೌನ್
ಜಾರಿಯಲ್ಲಿರಲಿದೆ. ಈ ಕುರಿತು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
“ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆಯವರೆಗೆ ಲಾಕ್‌ಡೌನ್ ಜಾರಿಯಲ್ಲಿರಲಿದೆ. ಸಾರ್ವಜನಿಕರು
ಅಗತ್ಯ ಸೇವೆಗಳಿಗೆ ಹೊರತುಪಡಿಸಿ, ಅನವಶ್ಯಕವಾಗಿ ಓಡಾಡಬಾರದು. ಅನಾವಶ್ಯಕವಾಗಿ ಓಡಾಡುವವರ ವಿರುದ್ಧ
ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಭಾನುವಾರ ಕಾಗಿರ್ಲ್​ ವಿಜಯ ದಿವಸ ಇರುವ ಕಾರಣ ಬೆಳಗ್ಗೆ 7.30ರಿಂದ ಮಧ್ಯಾಹ್ನ 12ರವರೆಗೆ ವಿಧಾನಸೌಧ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಾಪಸ್​ ಪಡೆದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್​ ಆದೇಶಿಸಿದ್ದಾರೆ. ಈ ಅವಧಿ ಬಿಟ್ಟು ಉಳಿದ ಸಮಯದಲ್ಲಿ ನಿರ್ಬಂಧ ಯಥಾವತ್ತಾಗಿ ಜಾರಿಯಲ್ಲಿ ಇರಲಿದೆ.

ನನಗೆಲ್ರಿ ಪಾಸಿಟಿವ್ ಇದೆ, ನಾನು ಜಿಲ್ಲಾಧಿಕಾರಿ ಕಣ್ರೀ…

ಶನಿವಾರ (ಜುಲೈ 25) ರಾತ್ರಿ 36 ಗಂಟೆಗಳ ಕಾಲ ಲಾಕ್​ಡೌನ್ ಜಾರಿ ಆಗಿದ್ದು, ನಿಷೇಧಾಜ್ಞೆ ನಡುವೆ ಜನರು ಅನಗತ್ಯವಾಗಿ ರಸ್ತೆಗೆ ಇಳಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ. ವಾಹನಗಳು ಜಪ್ತಿ ಆಗಲಿದ್ದು, ದಂಡ ಬೀಳಲಿದೆ.
ಭಾನುವಾರದ ರಜೆ ಗುಂಗಿನಲ್ಲಿ ಹೊರಗೆ ಬರುವ ಬದಲು ಜನರು ಮನೆಯಲ್ಲೇ ಸುರಕ್ಷಿತವಾಗಿ ಇರಬೇಕು. ವೀಕೆಂಡ್ ಲಾಕ್​ಡೌನ್​ ವೇಳೆ ಅಗತ್ಯ ವಸ್ತುಗಳ ಪೂರೈಕೆಗಷ್ಟೇ ಅವಕಾಶವಿದೆ. ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಸ್, ಹಾಲು, ದಿನಸಿ ಅಂಗಡಿ, ಹೋಟೆಲ್ (ಪಾರ್ಸಲ್ ಮಾತ್ರ), ತರಕಾರಿ, ಮಾಂಸದ ಅಂಗಡಿಗಳು ತೆರೆದಿರುತ್ತವೆ. ಕ್ಯಾಬ್​, ಕೆಎಸ್​ಆರ್​ಟಿಸಿ, ಬಿಎಂಟಿಸಿ, ಶಾಪಿಂಗ್​ ಮಾಲ್​, ಎಲ್ಲ ರೀತಿಯ ಅಂಗಡಿ, ಪ್ರವಾಸಿ ತಾಣ, ದೇವಸ್ಥಾನಗಳು ಬಂದ್​ ಆಗಲಿವೆ.

ಬೆಂಗಳೂರಲ್ಲಿ 2036, ರಾಜ್ಯದಲ್ಲಿ 5072 ಮಂದಿಗೆ ಸೋಂಕು; 72 ಜನ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!