Saturday, November 27, 2021

ಲಾಕ್ ಡೌನ್ ಕಟ್ಟುನಿಟ್ಟು ಜಾರಿ; ನಾಳೆ ರಾಜ್ಯಕ್ಕೆ ಪ್ಯಾರಾ ಮಿಲಿಟರಿ?

Follow Us

ನವದೆಹಲಿ: ಲಾಕ್ ಡೌನ್ ನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಕೇಂದ್ರ ನಿರ್ಧರಿಸಿದ್ದು, ಅಗತ್ಯವಿರುವ ರಾಜ್ಯಗಳಿಗೆ ಪ್ಯಾರಾ ಮಿಲಿಟರಿ ಪಡೆ ಕಳುಹಿಸಲು ಮುಂದಾಗಿದೆ.
ಈ ಸಂಬಂಧ ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳ ಜತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕಕ್ಕೂ ಇಂಥ ಪ್ಯಾರಾ ಮಿಲಿಟರಿ ಕಳುಹಿಸಲು ಕೇಂದ್ರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಎಲ್ಲವೂ ಅಂದುಕೊಂಡಂತೆ ಆದರೆ ನಾಳೆಯಿಂದಲೇ (ಮಾ.31) ಕರ್ನಾಟಕದ ಅಗತ್ಯ ಸ್ಥಳಗಳಲ್ಲಿ ಪ್ಯಾರಾ ಮಿಲಿಟರಿ ನಿಯೋಜನೆಗೊಳ್ಳಲಿದೆ. ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಲಾಕ್ ಡೌನ್ ಆದೇಶವನ್ನು ಸರಿಯಾಗಿ ಪಾಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಈಗಾಗಲೇ ಕೇಂದ್ರದ ಸಚಿವರು ಹಾಗೂ ಸಂಸದರ ಜತೆ ಸಭೆ ನಡೆಸಿ ಲಾಕ್ ಡೌನ್ ಕುರಿತಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ, ಅಮಿತ್ ಶಾ ಅವರು ಗೃಹ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ನೇರವಾಗಿ ಅಮಿತ್ ಶಾ ಅವರೇ ಪರಿಸ್ಥಿತಿ ಅವಲೋಕಿಸಲಾಗಿದ್ದು, ನಾಳೆಯಿಂದಲೇ ರಾಜ್ಯದಲ್ಲಿ ಪ್ಯಾರಮಿಲಿಟರಿ ನಿಯೋಜಿಸುವ ಕುರಿತು ಚರ್ಚೆ ನಡೆಸಲಾಗಿದೆ. ರಾಜ್ಯಗಳಿಗೆ ಪ್ಯಾರಾ ಮಿಲಿಟರಿ ರವಾನಿಸುವ ಕುರಿತಂತೆ ಇಂದು ರಾತ್ರಿಯೊಳಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಮತ್ತಷ್ಟು ಸುದ್ದಿಗಳು

Latest News

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...

ಲಾಲೂ ಪ್ರಸಾದ್ ಯಾದವ್ ಅಸ್ವಸ್ಥ: ಏಮ್ಸ್‌ಗೆ ದಾಖಲು

newsics.com ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಏಮ್ಸ್‌ನ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 73 ವರ್ಷದ ಲಾಲೂ ಅವರು ಜ್ವರ, ದಣಿವಿನಿಂದ ಬಳಲಿದ್ದು,...
- Advertisement -
error: Content is protected !!