newsics.com
ಚೆನ್ನೈ: ಖ್ಯಾತ ಗಾಯಕ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದೆ.
ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಬಗ್ಗೆ ಪುತ್ರ ಚರಣ್ ಮಾಹಿತಿ ನೀಡಿದ್ದು, ಕೆಲ ಕಾಲ ಕುಳಿತುಕೊಳ್ಳುವುದು ಹಾಗೂ ಸ್ವಲ್ಪ ಆಹಾರ ಸೇವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಜತೆಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಅಪ್ಪನ ಆರೋಗ್ಯ ಸ್ಥಿರವಾಗಿದೆ. ಅವರು ವೆಂಟಿಲೇಟರ್ನಲ್ಲೇ ಇದ್ದಾರೆ. ಉಳಿದೆಲ್ಲ ಆರೋಗ್ಯ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡುಬಂದಿಲ್ಲ. ವೈದ್ಯರ ಸಲಹೆ ಮೇರೆಗೆ ಪ್ರತಿದಿನ 20 ನಿಮಿಷ ಕುಳಿತುಕೊಳ್ಳುತ್ತಿದ್ದಾರೆ ಎಂದು ಚರಣ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಸೆ.30 ರವರೆಗೆ ಶಾಲಾ ಕಾಲೇಜು ಆರಂಭವಿಲ್ಲ
ಅಡುಗೆ ಅನಿಲ ಸಬ್ಸಿಡಿ ಮುಂದುವರಿಸಲು ಸರ್ಕಾರ ಚಿಂತನೆ
ನಿದ್ರೆ ಮಾಡಲು ಬಿಡುತ್ತಿಲ್ಲ ಕೋವಿಡ್ ಸೋಮ್ನಿಯಾ!
2 ಸಾವಿರ ಮುಖಬೆಲೆಯ ನೋಟು ಮುದ್ರಣ ಸ್ಥಗಿತವಿಲ್ಲ