newsics.com
ನಾಸಿಕ್: ಮಹಾರಾಷ್ಟ್ರದ ನಾಸಿಕ್ನಲ್ಲಿ ‘ಸೂಫಿ ಬಾಬಾ’ ಎಂದೇ ಖ್ಯಾತರಾಗಿದ್ದ ಆಧ್ಯಾತ್ಮಿಕ ನಾಯಕ ಖ್ವಾಜಾ ಸಯ್ಯದ್ ಚಿಶ್ತಿ (35) ಅವರನ್ನು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ತಲೆಗೆ ಗುಂಡು ತಗುಲಿದ ತಕ್ಷಣವೇ ಮೃತಪಟ್ಟಿದ್ದಾರೆ.
ಕೊಲೆಗಾರರು ಕೂಡಲೇ ಎಸ್ಯುವಿಯಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಫ್ಘಾನಿಸ್ತಾನದಿಂದ ಬಂದಿದ್ದ ಸಯ್ಯದ್ ಚಿಶ್ತಿ ಹಲವಾರು ವರ್ಷಗಳಿಂದ ನಾಸಿಕ್ನ ಯೋಲಾ ಪಟ್ಟಣದಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.