Monday, April 12, 2021

ರಾಜ್ಯದಲ್ಲಿ SSLC ಪರೀಕ್ಷೆ ಮುಂದೂಡುವಂತೆ ಸುಪ್ರೀಂಗೆ ಮೇಲ್ಮನವಿ

ಬೆಂಗಳೂರು: ಕೊರೋನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.
ಜೂನ್ 25ರಂದು ನಿಗದಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡುವಂತೆ ಪೋಷಕಿ ಬೆಳಗಾವಿ ಮೂಲದ ರಾಜಶ್ರೀ ನಾಗರಾಜ್ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ.
ಹೈಕೋರ್ಟ್ ನಲ್ಲೂ ಈ ಸಂಬಂಧ ಸಾರ್ವಜನಿಕ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಹೈಕೋರ್ಟ್ ಪೀಠ ಪರೀಕ್ಷೆಗೆ ತಡೆ ನೀಡಲು ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ, ಇದೀಗ ಪೋಷಕರಾದ ರಾಜಶ್ರೀ ನಾಗರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೀಗಾಗಿ ಪರೀಕ್ಷೆ ನಡೆಯುತ್ತೋ ಇಲ್ಲವೋ ಎಂಬ ಗೊಂದಲ ಉಂಟಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!