ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣ ನಡೆದ ಸಮಯದಲ್ಲಿ ತನಗೆ 18 ವರ್ಷ ತುಂಬಿರಲಿಲ್ಲ. ಈ ಹಿನ್ನೆಲೆಯಲ್ಲಿ ತಮಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ನಾಲ್ವರು ಅಪರಾಧಿಗಳ ಪೈಕಿ ಓರ್ವನಾದ ಪವನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.
2012ರ ಡಿ. 16 ರಂದು ಅತ್ಯಾಚಾರ ನಡೆದ ಸಂದರ್ಭದಲ್ಲಿ ಅರ್ಜಿದಾರ ಅಪ್ರಾಪನಾಗಿರಲಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ. ಈ ನಾಲ್ವರು ಅಪರಾಧಿಗಳಿಗೆ ಫೆಬ್ರವರಿ 1ಕ್ಕೆ ಗಲ್ಲು ಶಿಕ್ಷೆ ಜಾರಿಗೊಳಿಸಲು ನಿರ್ಧರಿಸಲಾಗಿದೆ.