ನವದೆಹಲಿ: ಇಂದು ಮುಂಜಾನೆ ರಾಷ್ಟ್ರೀಯ ತನಿಖಾದಳ ಬಂಧಿಸಿರುವ ಒಂಬತ್ತು ಶಂಕಿತ ಉಗ್ರರು ದೆಹಲಿ ಮತ್ತು ಹೊರವಲಯದಲ್ಲಿ ಭಾರೀ ಸ್ಫೋಟಕ್ಕೆ ಸಂಚು ಹೂಡಿದ್ದರು ಎಂಬ ಮಾಹಿತಿ ಪ್ರಾಥಮಿಕ ವಿಚಾರಣೆಯಿಂದ ಬೆಳಕಿಗೆ ಬಂದಿದೆ.
ಕೇರಳದಲ್ಲಿ ಬಂಧಿಸಲಾದ ಮೂವರು ಮೂಲತ: ಪಶ್ಚಿಮ ಬಂಗಾಳದವರಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರು ಮತ್ತು ಕೇರಳದಲ್ಲಿ ಮೂರು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದಕ್ಕೂ ಮೊದಲು 11 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು ಎಂದು ವರದಿಯಾಗಿತ್ತು.
ಲಾಕ್ ಡೌನ್ ಸಂದರ್ಭದಲ್ಲಿ ಆರೋಪಿಗಳು ಕೇರಳಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ. ಕೇರಳದ ಕೊಚ್ಚಿ ಮತ್ತು ಪರಿಸರದಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಬಂಧಿತರಾದ ಎಲ್ಲರೂ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಿವಾಸಿಗಳಾಗಿದ್ದಾರೆ.
ಅಲ್ ಖೈದಾ ಉಗ್ರ ಸಂಘಟನೆಯ ಜತೆ ಬಂಧಿತರೆಲ್ಲರೂ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಕೂಡ ತಿಳಿದು ಬಂದಿದೆ.