Saturday, April 17, 2021

ಹೊಂಡಕ್ಕೆ ಹೆಣ ಎಸೆದವರು ಸಸ್ಪೆಂಡ್, ಕೊನೆಗೂ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತಪಟ್ಟವರನ್ನು ಅಮಾನವೀಯವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಬಳ್ಳಾರಿ ಜಿಲ್ಲೆಯ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಅಮಾನತುಪಡಿಸಿದೆ.
ಸೋಶಿಯಲ್ ಮೀಡಿಯಾ ಹಾಗೂ ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಅಂತ್ಯಸಂಸ್ಕಾರ ಮಾಡಿದ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಸೇವೆಯಿಂದ ಅಮಾನತುಗೊಳಿಸಿದೆ.
ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಘಟನೆಗೆ ಬಳ್ಳಾರಿ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಕ್ಷೇಮೆ ಕೋರಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದೆ.
ಜಿಲ್ಲೆಯಲ್ಲಿ ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್​ನ ನುರಿತ ತಂಡವನ್ನು ನೇಮಕ ಮಾಡಿದೆ. ಬಳ್ಳಾರಿ ಜಿಲ್ಲೆಯಲ್ಲಿ ಅಂತ್ಯಕ್ರಿಯೆ ವೇಳೆ ಒಂದೇ ಗುಂಡಿಗೆ ಸೋಂಕಿತರ ಎರಡೆರಡು ಮೃತದೇಹ ಹಾಕಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಸೋಂಕಿತರ ಮೃತದೇಹವನ್ನು ಗುಂಡಿಗೆ ಎಸೆದಿದ್ದರು. ಇದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಸಿಬ್ಬಂದಿ ನಡವಳಿಕೆ ಅತ್ಯಂತ ಅಮಾನವೀಯ ಹಾಗೂ ತೀವ್ರ ನೋವಿನ ಸಂಗತಿ. ಕೊರೋನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಪ್ರತ್ಯೇಕ ನಿಯಮಾವಳಿಗಳಿದ್ದು ಅವುಗಳನ್ನು ಪಾಲಿಸಲು ಇಲಾಖೆಯ ಎಲ್ಲ ಸಿಬ್ಬಂದಿಯಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

http://134.209.153.225/many-dead-bodies-in-to-one-pit/

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!