ಮಂಗಳೂರು: ಕಡಲ ನಗರಿ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದೆ. ಮುಂಜಾನೆ 7.30ರ ಹೊತ್ತಿಗೆ ವ್ಯಕ್ತಿಯೊಬ್ಬ ಬ್ಯಾಗ್ ಒಂದನ್ನು ಇರಿಸಿ ತೆರಳಿದ್ದಾನೆ ಎಂದು ಹೇಳಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಡಾ. ಪಿ. ಎಸ್. ಹರ್ಷ ಸ್ಥಳಕ್ಕೆ ಧಾವಿಸಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.