Saturday, April 17, 2021

ಸ್ವಪ್ನಾ ಸುರೇಶ್ ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: 30 ಕೋಟಿ ರೂಪಾಯಿ ಚಿನ್ನ ಕಳ್ಳ ಸಾಗಾಟದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ನಾಳೆ ಅವರನ್ನು ಕೊಚ್ಚಿಯಲ್ಲಿ  ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಕಳೆದ ಒಂದು ವಾರದಿಂದ ಸ್ವಪ್ನಾ ಸುರೇಶ್ ತಲೆ ಮರೆಸಿಕೊಂಡಿದ್ದರು. ಅಜ್ಞಾತ ಸ್ಥಳದಿಂದ  ಸುದ್ದಿ ವಾಹಿನಿಗಳಿಗೆ ಧ್ವನಿ ಸಂದೇಶ ಕಳುಹಿಸಿದ್ದ ಅವರು, ಪ್ರಕರಣದಲ್ಲಿ ನಾನು ನಿರಪರಾಧಿ. ನನ್ನನ್ನು ಇದರಲ್ಲಿ ಸಿಲುಕಿಸಲಾಗುತ್ತಿದೆ ಎಂದು ಆರೋಪಿಸಿದ್ದರು. ರಾಜಕೀಯ ನಾಯಕರು ಮತ್ತು ಅಧಿಕಾರಿಗಳ ಜತೆ ಉತ್ತಮ ಸಂಬಂಧ ಹೊಂದಿದ್ದೇನೆ. ಆದರೆ ಅದನ್ನು ನಾನು ದುರುಪಯೋಗ ಪಡಿಸಿರಲಿಲ್ಲ ಎಂದು ಹೇಳಿದ್ದರು.

ಕೇರಳ ರಾಜಧಾನಿ ತಿರುವನಂತಪುರಂನಲ್ಲಿ ಟ್ರಿಪಲ್ ಲಾಕ್ ಡೌನ್ ಜಾರಿಯಲ್ಲಿದ್ದರೂ ಸ್ವಪ್ನಾ ಸುರೇಶ್ ಅಲ್ಲಿಂದ ಬೆಂಗಳೂರಿಗೆ ಬಂದಿರುವುದು  ಅಚ್ಚರಿ ಮೂಡಿಸಿದೆ. ಪ್ರಕರಣದಲ್ಲಿ ಕೇರಳ ಮುಖ್ಯಮಂತ್ರ್ರಿ ಪಿಣರಾಯಿ ವಿಜಯನ್ ಕೂಡ ಶಾಮೀಲಾಗಿದ್ದಾರೆ

ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಇಂದು ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲ ಫಿರಂಗಿ ಕೂಡ ಬಳಸಿದರು,

ಇದೇ ವೇಳೆ ಕೊರೋನಾ ನಿರ್ಬಂಧ ಉಲ್ಲಂಘಿಸಿ ಪ್ರತಿಭಟನೆ ನಡೆಸಿದರೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಪಿಣರಾಯಿ  ವಿಜಯನ್ ಹೇಳಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!