Saturday, April 17, 2021

ತಮಿಳುನಾಡು ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 59ಕ್ಕೆ ಏರಿಕೆ

ಚೆನ್ನೈ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58ರಿಂದ 59ಕ್ಕೆ ಹೆಚ್ಚಿಸಿ ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದೆ.
ನಿವೃತ್ತಿಯ ವಯಸ್ಸನ್ನು ಹೆಚ್ಚಿಸುವ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರ ಆದೇಶವು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ನಿವೃತ್ತಿ ವಯಸ್ಸಿನ ಹೆಚ್ಚಳದ ಆದೇಶವು ಸರ್ಕಾರಿ ನೌಕರರು, ಶಿಕ್ಷಕರು, ಉಪನ್ಯಾಸಕರು ಮತ್ತು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳಲ್ಲಿನ ಪ್ರಾಧ್ಯಾಪಕರಿಗೆ ರಾಜ್ಯ ಸಾರ್ವಜನಿಕ ವಲಯದ ಘಟಕಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.
ಈಗಾಗಲೇ, ಮಾರ್ಚ್ 31 ಮತ್ತು ಏಪ್ರಿಲ್ 30 ರಂದು ನಿವೃತ್ತರಾಗಬೇಕಿದ್ದ ಸರ್ಕಾರಿ ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಯ ಸೇವೆಗಳನ್ನು ಇನ್ನೂ ಎರಡು ತಿಂಗಳು ವಿಸ್ತರಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!