newsics.com
ಮುಂಬೈ/ ನವದೆಹಲಿ: ಕನಿಷ್ಠ ಒಂದು ವರ್ಷದವರೆಗೆ ಈಗಿರುವ ಏರ್ ಇಂಡಿಯಾದ ನೌಕರರನ್ನು ಸೇವೆಯಲ್ಲಿ ಮುಂದುವರಿಸಬೇಕೆಂದು ಟಾಟಾ ಸನ್ಸ್ಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಏರ್ ಇಂಡಿಯಾ ಖಾಸಗೀಕರಣಗೊಳಿಸುವ ಬಿಡ್ ಗೆದ್ದ ಟಾಟಾ ಸನ್ಸ್ಗೆ ಕೇಂದ್ರ ಸರ್ಕಾರ ಈ ಷರತ್ತು ವಿಧಿಸಿದೆ.
ಈ ಮಾಹಿತಿ ನೀಡಿರುವ ವಿಮಾನಯಾನ ಸಚಿವಾಲಯ ಕಾರ್ಯದರ್ಶಿ ರಾಜೀವ್ ಬನ್ಸಲ್, ಏರ್ ಇಂಡಿಯಾದಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರ ಹಿತಾಸಕ್ತಿಗಳನ್ನು ಪರಿಗಣಿಸಿ, ಬಿಡ್ಡಿಂಗ್ನಲ್ಲಿ ಗೆದ್ದಿರುವ ಟಾಟಾ ಗ್ರೂಪ್ ನೌಕರರನ್ನು ಒಂದು ವರ್ಷ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ತೆಗೆದುಹಾಕುವಂತಿಲ್ಲ. ಜತೆಗೆ ಒಂದು ವರ್ಷದ ನಂತರ ಸಂಸ್ಥೆ ಸೇವೆಯಿಂದ ತೆಗೆದುಹಾಕುವ ನೌಕರರಿಗೆ ವಿಆರ್ಎಸ್ ಸೌಲಭ್ಯ ನೀಡಬೇಕೆಂದು ತಿಳಿಸಿದ್ದಾರೆ
ಏರ್ ಇಂಡಿಯಾದಲ್ಲಿ ಒಟ್ಟು 8 ಸಾವಿರಕ್ಕೂ ಅಧಿಕ ಕಾಯಂ ಮತ್ತು 4 ಸಾವಿರಕ್ಕೂ ಹೆಚ್ಚು ಗುತ್ತಿಗೆ ಸಿಬ್ಬಂದಿಯನ್ನು ಒಳಗೊಂಡು ಒಟ್ಟು 12 ಸಾವಿರಕ್ಕೂ ಅಧಿಕ ಉದ್ಯೋಗಿಗಳಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಸುಮಾರು 5 ಸಾವಿರ ಉದ್ಯೋಗಿಗಳು ಸಂಸ್ಥೆಯಿಂದ ನಿವೃತ್ತರಾಗಲಿದ್ದಾರೆ.
ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್ ಕಾಂತಾ, ಡಿ.10ರ ವೇಳೆಗೆ ಸಂಪೂರ್ಣವಾಗಿ ಏರ್ ಇಂಡಿಯಾವನ್ನು ಟಾಟಾ ಸನ್ಸ್ಗೆ ಹಸ್ತಾಂತರ ಮಾಡಲಾಗುವುದು ಎಂದರು.
ಕೊರೋನಾ ವ್ಯಾಕ್ಸಿನ್ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಫೋಟೋ: ಕೇರಳ ಹೈಕೋರ್ಟ್ ನೋಟಿಸ್