newsics.com
ನವದೆಹಲಿ: ನಾಗರಿಕ ಸೇವಾ ಪರೀಕ್ಷೆಯಿಂದ ಸಿವಿಲ್ ಸರ್ವೀಸಸ್ ಆಪ್ಟಿಟ್ಯೂಡ್ ಟೆಸ್ಟ್ (ಸಿಎಸ್‌ಎಟಿ) ಕೈಬಿಡುವ ಯೋಚನೆ ಇಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ.
ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆ ಹಾಗೂ ಪಿಂಚಣಿ ಖಾತೆಯ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಅವರು ಇಲ್ಲ ಎಂದು ಉತ್ತರಿಸಿದ್ದಾರೆ.
ಕೃಷಿ ಸಂಬಂಧಿತ ಮಸೂದೆ; ಸಚಿವೆ ಹರ್ ಸಿಮ್ರತ್ ಕೌರ್ ರಾಜೀನಾಮೆ
ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‌ಸಿ) ಐಎಎಸ್, ಐಎಫ್‌ಎಸ್ ಹಾಗೂ ಐಪಿಎಸ್ ಹುದ್ದೆಗಳಿಗೆ ಆಯ್ಕೆ ಮಾಡಲು ವರ್ಷಕ್ಕೊಮ್ಮೆ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಒಳಗೊಂಡ ಮೂರು ಹಂತಗಳ ನಾಗರಿಕ ಸೇವಾ ಪರೀಕ್ಷೆಯನ್ನು ನಡೆಸುತ್ತದೆ. ಸಿಎಸ್‌ಎಟಿ ಪೂರ್ವಭಾವಿ ಪರೀಕ್ಷೆಯ ಒಂದು ಭಾಗವಾಗಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ)ಯು ಉನ್ನತ ಶಿಕ್ಷಣ ಸಂಸ್ಥೆಗಳ ದಾಖಲಾತಿ/ಫೆಲೋಶಿಪ್‌ಗೆ ಪ್ರವೇಶ ಪರೀಕ್ಷೆ ನಡೆಸುತ್ತದೆ. ಯುಪಿಎಸ್‌ಸಿಯಲ್ಲಿರುವ ಈಗಿರುವ ಸಂದರ್ಶನದ ಬದಲು ಮಾನಸಿಕ ಪರೀಕ್ಷೆ ನಡೆಸುವ ಚಿಂತನೆ ಇಲ್ಲ ಎಂದು ಎನ್‌ಟಿಎ ಮಾಹಿತಿ ನೀಡಿದೆ ಎಂದು ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆ ಹಾಗೂ ಪಿಂಚಣಿ ಖಾತೆಯ ಸಹಾಯಕ ಸಚಿವ ಜಿತೇಂದ್ರ ಸಿಂಗ್, ‘ಇಲ್ಲ’ ಎಂದು ತಿಳಿಸಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ಕಂಬೈನ್ಡ್ ಗ್ರಾಜುವೇಟ್ ಲೆವೆಲ್ ಎಕ್ಸಾಮಿನೇಷನ್-2018 ಟಯರ್-3 ಪರೀಕ್ಷಾ ಫಲಿತಾಂಶ ವಿಳಂಬವಾಗಿದೆ. ಫಲಿತಾಂಶವನ್ನು ಆದಷ್ಟು ಬೇಗ ಪ್ರಕಟಿಸಲು ಪ್ರಯತ್ನಿಸುತ್ತೇವೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಆಸ್ಪತ್ರೆಯಿಂದ ಅಮಿತ್ ಶಾ ಬಿಡುಗಡೆ
ಪ್ಲಾಸ್ಮಾದಾನ ಮಾಡಿ ಮೋದಿ ಬರ್ತಡೇ ಆಚರಿಸಿದ ಶಾಸಕ
ದೀಪಿಕಾ ನೋಡಿ ಕಲಿಯಿರಿ… ಕಂಗನಾಗೆ ರಮ್ಯ ಟ್ವೀಟ್ ಪಾಠ