Tuesday, April 13, 2021

ಆಗಸ್ಟ್ 15ರ ಬಳಿಕ ದೇಶದಲ್ಲಿ ಶಾಲಾ ಕಾಲೇಜು ಆರಂಭ; ಕೇಂದ್ರ ನಿರ್ಧಾರ

♦ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಮಾಹಿತಿ 

ನವದೆಹಲಿ: ರಾಜ್ಯದಲ್ಲಿ ಕೊವೀಡ್-19 ಹಾವಳಿ ಮಧ್ಯೆ ಶಾಲಾ-ಕಾಲೇಜುಗಳ ಪುನಾರಂಭ ಬೇಕಾ ಬೇಡವಾ ಎಂಬ ಚರ್ಚೆ ಕಾವೇರಿರುವಾಗಲೇ ಕೇಂದ್ರ ಸರ್ಕಾರ ಶಾಲಾ-ಕಾಲೇಜುಗಳ ಆರಂಭಕ್ಕೆ ಮುಹೂರ್ತ ನಿಗದಿಪಡಿಸಿದೆ.
ಆಗಸ್ಟ್ 15 ರ ಬಳಿಕ ದೇಶದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಿದ್ದು, ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಮಾಹಿತಿ ನೀಡಿದ್ದಾರೆ. ಆಗಸ್ಟ್ 15 ಸ್ವಾತಂತ್ರ್ಯ ದಿನವಾಗಿದ್ದು, ಮಾರನೇ ದಿನ ಭಾನುವಾರವಿರುವುದರಿಂದ ಆಗಸ್ಟ್ 17 ರಿಂದ ಶಾಲಾ ಕಾಲೇಜುಗಳನ್ನು ಆರಂಭಿಸುವ ಸಾಧ್ಯತೆಗಳಿವೆ.
ಈಗಾಗಲೇ ದೇಶದೆಲ್ಲೆಡೆ ಪ್ರಮುಖ ಪರೀಕ್ಷೆಗಳು ಆರಂಭಗೊಂಡಿದೆ. ಜುಲೈ ಅಂತ್ಯಕ್ಕೆ ಪರೀಕ್ಷೆಗಳು ಮುಗಿಯಲಿದ್ದು ಆ ಬಳಿಕ ಸೂಕ್ತ ಮುಂಜಾಗ್ರತಾ ಕ್ರಮಗಳ ಜತೆ ಶಾಲಾ ಕಾಲೇಜುಗಳನ್ನು ಅರಂಭಿಸಲು ಸಿದ್ಧತೆ ನಡೆಸಲಾಗಿದ್ದು ಮಾರ್ಗಸೂಚಿ ಸಿದ್ಧವಾಗುತ್ತಿದೆ ಎಂದು ಖಾಸಗಿ ವಾಹಿನಿ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಸುತ್ತ ಬಂದಿದ್ದರೂ ಇದುವರೆಗೂ ಶಾಲಾ ಕಾಲೇಜುಗಳ ಬಾಗಿಲು ತೆರೆಯಲು ಅನುಮತಿ ನೀಡಿರಲಿಲ್ಲ. ಇದೀಗ ಅಗಸ್ಟ್’ನಲ್ಲಿ ಪುನಾರಂಭಕ್ಕೆ ಸಿದ್ಧತೆ ನಡೆಸಿರುವ ಮಾಹಿತಿ ನೀಡುತ್ತಿದೆ. ಆದರೆ, ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ‌ ನೇತೃತ್ವದ ಸರ್ಕಾರ ಶಾಲೆ ಕಾಲೇಜುಗಳನ್ನು ಜುಲೈನಲ್ಲಿ ತೆರೆಯಲು ಚಿಂತನೆ ನಡೆಸಿತ್ತಾದರೂ ಇದಕ್ಕೆ ಪೋಷಕರ ತೀವ್ರ ವಿರೋಧ ವ್ಯಕ್ತವಾಗಿದೆ. ಆದರೂ ಸರ್ಕಾರ ಶಿಕ್ಷಕರನ್ನು ಶಾಲೆಗಳಿಗೆ ಕರೆಸಿಕೊಂಡಿದ್ದು ಶಾಲೆ ಆರಂಭಿಸುವ ಪ್ರಯತ್ನ ತೆರೆಮರೆಯಲ್ಲಿ ನಡೆದಂತಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!