Saturday, April 17, 2021

ವಿಷಾನಿಲ ದುರಂತ; ಮೃತರ ಕುಟುಂಬಕ್ಕೆ ಕೋಟಿ ರೂ. ಪರಿಹಾರ

ವಿಶಾಖಪಟ್ಟಣಂ: ವಿಶಾಖ ಪಟ್ಟಣಂನ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ ನಲ್ಲಿ ಗುರುವಾರ ಸಂಭವಿಸಿದ ವಿಷಾನಿಲ ದುರಂತದಲ್ಲಿ ಮೃತಪಟ್ಟ ಎಲ್ಲ 11 ಮಂದಿಯ ಕುಟುಂಬಕ್ಕೆ ಆಂಧ್ರಪ್ರದೇಶ ಸರ್ಕಾರ 1 ಕೋಟಿ, ತೀವ್ರವಾಗಿ ಅಸ್ವಸ್ಥಗೊಂಡವರಿಗೆ 10 ಲಕ್ಷ ಪರಿಹಾರ ಘೋಷಿಸಿದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಇದೊಂದು ಘೋರ ದುರಂತವಾಗಿದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದೆ. ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಸ್ ಸುತ್ತಮುತ್ತಲಿನ ಗ್ರಾಮಸ್ಥರನ್ನು ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ತಿಳಿಸಿದರು.
ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಸ್ ವಿಷಾನಿಲ ದುರಂತದಲ್ಲಿ ಇದುವರೆಗೆ 11 ಜನರು ಸಾವನ್ನಪ್ಪಿದ್ದಾರೆ. 300 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!