Monday, April 12, 2021

ಶೈಕ್ಷಣಿಕ ಅವಧಿ ಶೇ.50ರಷ್ಟು ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ

♦ ವಾರ್ಷಿಕ ಶೈಕ್ಷಣಿಕ ಅವಧಿ 220 ರಿಂದ 100 ದಿನಕ್ಕೆ ಇಳಿಕೆ
♦ ಮಕ್ಕಳಿಗೆ ಲರ್ನ್ ಫ್ರಮ್ ಹೋಮ್ ಪದ್ಧತಿಗೆ ಆದ್ಯತೆ

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಶೈಕ್ಷಣಿಕ ಅವಧಿಯನ್ನು ಶೇ.50ರಷ್ಟು ಅಂದರೆ 100 ದಿನಗಳಿಗೆ ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಈ ಸಂಬಂಧ ಹಲವು ಶಿಕ್ಷಣ ಹಾಗೂ ವಿಷಯ ತಜ್ಞರ ಸಲಹೆ ಪಡೆದಿದ್ದು, ಹೊಸ ಶೈಕ್ಷಣಿಕ ವೇಳಾಪಟ್ಟಿ ತಯಾರಿಸುತ್ತಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಸದ್ಯ 220 ದಿನಗಳ ಕಾಲ ಶಾಲಾ ಶೈಕ್ಷಣಿಕ ಚಟುವಟಿಕೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಕೇವಲ 100 ದಿನಗಳ ಕಾಲ ಶೈಕ್ಷಣಿಕ ಚಟುವಟಿಕೆ ನಡೆಸಿ, ಉಳಿದ 100 ದಿನಗಳನ್ನು ಮಕ್ಕಳು ಮನೆಯಲ್ಲಿಯೇ ಶಿಕ್ಷಣ ಪಡೆಯುವಂತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಗಂಭೀರ ಚಿಂತನೆಯನ್ನು ನಡೆಸುತ್ತಿದೆ.
ಐಟಿ -ಬಿಟಿ ಕಂಪನಿಗಳಿಗೆ ವರ್ಕ್ ಫ್ರಮ್ ಹೋಮ್ ಮಾಡಿದಂತೆ, ಮಕ್ಕಳಿಗೆ ಲರ್ನ್ ಫ್ರಮ್ ಹೋಮ್ ಮಾಡಲು ಚಿಂತನೆ ನಡೆಸಿದೆ. ಹೊಸ ವೇಳಾಪಟ್ಟಿ ಕುರಿತಂತೆ ಹಾಗೂ ಶಾಲೆಗಳ ಪುನಾರಂಭ ವಿಚಾರವಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಶೀಘ್ರದಲ್ಲಿಯೇ ಮಾರ್ಗಸೂಚಿ ಹೊರಡಿಸಲಿದೆ ಎಂದು ತಿಳಿದುಬಂದಿದೆ.
ಹೊಸ ಶೈಕ್ಷಣಿಕ ವೇಳಾಪಟ್ಟಿ ಪ್ರಕಾರ, ಎಲ್ಲ ಶಾಲಾ ಕಾಲೇಜುಗಳಲ್ಲಿ ಶೇ.30- 35ರಷ್ಟು ಮಕ್ಕಳು ಮಾತ್ರ ಇರಬೇಕು. ಹೀಗಾಗಿ ಪಾಳಿ ಪದ್ಧತಿಯಲ್ಲಿ ಮಕ್ಕಳನ್ನು ಶಾಲೆ, ಕಾಲೇಜುಗಳಿಗೆ ಕರೆಸಿಕೊಳ್ಳಲು ಯೋಚಿಸಲಾಗುತ್ತಿದೆ. ಎಲ್ಲ ತರಗತಿಗಳಲ್ಲೂ ವಿದ್ಯಾರ್ಥಿಗಳ ಹಲವು ಗುಂಪುಗಳನ್ನಾಗಿ ಮಾಡಿ, ಆಯಾ ದಿನಗಳಂದು ನಿರ್ದಿಷ್ಟ ತರಗತಿಯಲ್ಲಿ ನಿರ್ದಿಷ್ಟ ಗುಂಪು ಮಾತ್ರ ಇರುವಂತೆ ನೋಡಿಕೊಳ್ಳಲು ಚಿಂತಿಸಲಾಗಿದೆ. ವಿದ್ಯಾರ್ಥಿಗಳ ವಯಸ್ಸಿಗನುಗುಣವಾಗಿ ಬೇರೆ ಬೇರೆ ಹಂತಗಳಲ್ಲಿ ತರಗತಿಗಳನ್ನು ವಿಂಗಡಿಸಿ, ಚಿಕ್ಕಮಕ್ಕಳು ಶಾಲೆಯಲ್ಲಿ ಕಡಿಮೆ ಸಮಯ ಇರುವಂತೆ ಮಾಡುವ ನಿಟ್ಟಿನಲ್ಲೇ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಉದಾಹರಣೆಗೆ ಒಂದರಿಂದ ಐದನೇ ತರಗತಿವರೆಗಿನ ಮಕ್ಕಳು ವಾರದಲ್ಲಿ ಒಂದು ಅಥವಾ ಎರಡು ದಿನ, ಆರರಿಂದ ಎಂಟನೇ ತರಗತಿವರೆಗಿನ ಮಕ್ಕಳು ವಾರದಲ್ಲಿ ಎರಡು ಅಥವಾ ಮೂರು ದಿನ, 9 ಮತ್ತು 10ನೇ ತರಗತಿ ಮಕ್ಕಳು ವಾರದಲ್ಲಿ ನಾಲ್ಕು ದಿನ ಮಾತ್ರ ಶಾಲೆಗೆ ಹೋಗಬೇಕಾಗಬಹುದು. ಆಯಾ ದಿನ ನಿಗದಿಪಡಿಸಿದ ಗುಂಪಿನ ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಮಾಡಲು ಚಿಂತಿಸಲಾಗಿದೆ.
ಮನೆಯಲ್ಲೇ ಇದ್ದು ಓದಿಕೊಳ್ಳಲು ಅನುಕೂಲವಾಗುವಂತೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಾಗಲೇ ಮೂರು ಹೊಸ ಕಲಿಕಾ ವಾಹಿನಿ ಆರಂಭಿಸಲು ಅನುಮತಿ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ. ಒಟ್ಟಿನಲ್ಲಿ ಮಕ್ಕಳನ್ನು ಶಾಲೆಗಳಿಗಿಂತ ಮನೆಯಲ್ಲೇ ಹೆಚ್ಚು ಕಾಲ ಇರುವಂತೆ ಮಾಡಲು ಕೇಂದ್ರ ಸರ್ಕಾರ ಶೈಕ್ಷಣಿಕ ಯೋಜನೆ ರೂಪಿಸಲು ಮುಂದಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!