Monday, April 12, 2021

ಅಂಫಾನ್ ಅಬ್ಬರಕ್ಕೆ ದೇಶದ ಕರಾವಳಿ ತತ್ತರ, ರಾಜ್ಯದಲ್ಲಿ ಇನ್ನೆರಡು ದಿನ ಮಳೆ

ನವದೆಹಲಿ/ ಬೆಂಗಳೂರು: ಅಂಫಾನ್ ಚಂಡಮಾರುತ ತನ್ನ ಅಟ್ಟಹಾಸ ಆರಂಭಿಸಿದೆ. ಅಂಫಾನ್ ಅಬ್ಬರಕ್ಕೆ 100 ಕ್ಕೂ ಹೆಚ್ಚು ಬೋಟ್ ಛಿದ್ರವಾದ ಘಟನೆ ತಮಿಳುನಾಡಿನ ರಾಮೇಶ್ವರಂ ಸಮುದ್ರ ತೀರದಲ್ಲಿ ನಡೆದಿದೆ.
ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಪತಿವಾಡ ಬರ್ರಿವಾಡ ಗ್ರಾಮದ ಬಳಿ ಓರ್ವ ಮೀನುಗಾರ ಮೃತಪಟ್ಟಿದ್ದಾರೆ. ಅಂಫಾನ್ ಚಂಡಮಾರುತದ ಅಬ್ಬರಕ್ಕೆ ಸಮುದ್ರದಲ್ಲಿ ಮೀನುಗಾರಿಕೆ ದೋಣಿ ಮಗುಚಿ ಮೀನುಗಾರ ಸಾವನ್ನಪ್ಪಿದ್ದಾನೆ.
ತಮಿಳುನಾಡಿನ ಕರಾವಳಿ ತೀರಗಳಾದ ಪಂಬನ್, ರಾಮೇಶ್ವರಂ ತಂಗಚಿಮಡಂನಲ್ಲಿ ಭಾರಿ ಗಾಳಿಮಳೆಯಾಗಿ ಲಂಗರು ಹಾಕಿದ್ದ 100 ದೋಣಿಗಳು ಹಾನಿಗೀಡಾಗಿದೆ ಎಂದು ಮೀನುಗಾರಿಕೆ ಅಧಿಕಾರಿಗಳು ಹೇಳಿದ್ದಾರೆ.
ಈ ಮಧ್ಯೆ, ಅಂಫಾನ್‌ ಚಂಡಮಾರುತ ಪ್ರಭಾವದಿಂದ ಮೇ 19 ಹಾಗೂ 20 ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎರಡು ದಿನ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆ ಸುರಿಯಲಿದ್ದು, ಸಾರ್ವಜನಿಕರು ಎಚ್ಚರವಾಗಿರಬೇಕು ಎಂದು ಸೂಚನೆ ನೀಡಿದೆ.
ಕಳೆದೆರಡು ದಿನಗಳಿಂದ ರಾಜ್ಯದ ಹಲವೆಡೆ ಬಿರುಸಿನ ಮಳೆ ಸುರಿಯುತ್ತಿದೆ. ಬೆಂಗಳೂರು, ಮೈಸೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ.
ಮರಗಳು ಬಿದ್ದು, ವಿದ್ಯುತ್ ಕಂಬಗಳು ಧರೆಗುರುಳಿವೆ. ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು ದೈತ್ಯ ಅಲೆಗಳು ಉಂಟಾಗುತ್ತಿವೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!