Wednesday, November 29, 2023

ಇನ್ಮುಂದೆ ವಿದ್ಯುತ್‌ಗೂ ಸಿಗಲಿದೆ ಎಲ್‌ಪಿಜಿ ಮಾದರಿ ಸಬ್ಸಿಡಿ..!

Follow Us

newsics.com 
ನವದೆಹಲಿ: ದೇಶದಲ್ಲಿ ʼವಿದ್ಯುತ್‌ ನಿಯಮಾವಳಿ-2020’ರ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ವಿದ್ಯುತ್ ಗೆ ಸಬ್ಸಿಡಿ ಹಣನೀಡಲೂ ಚಿಂತನೆ ನಡೆಸಿದೆ.
ಈ ನಿಯಮಾವಳಿ ಜಾರಿಯಾದರೆ ವಿದ್ಯುತ್ ಗ್ರಾಹಕರ ಹಕ್ಕು ಎಂದು ಪರಿಗಣನೆಯಾಗಲಿದ್ದು, ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್‌ ಖಾತೆಗೆ ನೇರ ಸಬ್ಸಿಡಿ ಹಣ ಜಮೆ ಆಗಲಿದೆ.
ನಿಯಮಾವಳಿ ಪ್ರಕಾರ ವಿದ್ಯುತ್‌ ಪಡೆಯುವುದು ಈ ದೇಶದಲ್ಲಿರುವ ಪ್ರತಿಯೊಬ್ಬರ ಹಕ್ಕಾಗಲಿದೆ. ಈಗಾಗಲೇ ಕೇಂದ್ರ ಇಂಧನ ಇಲಾಖೆ ಈ ಸಂಬಂಧ ಕರಡು ನಿಯಮಾವಳಿ ರೂಪಿಸಿದ್ದು, ಅದಕ್ಕೆ ಈ ವರ್ಷದ ಸೆ.30ರೊಳಗೆ ಜನರಿಂದ ಆಕ್ಷೇಪಣೆ ಆಹ್ವಾನಿಸಿದೆ.
ಕೇವಲ 2 ದಾಖಲೆ ಸಲ್ಲಿಸಿ ವಿದ್ಯುತ್‌ ಸಂಪರ್ಕ ಪಡೆಯಲು ಈ ನಿಯಮಾವಳಿ ನೆರವಾಗಲಿದೆ. ಮೆಟ್ರೋ ನಗರಗಳಲ್ಲಿ ಜನರು ಅರ್ಜಿ ಸಲ್ಲಿಸಿದ 7 ದಿನ, ಮುನ್ಸಿಪಲ್‌ ಪಟ್ಟಣಗಳಲ್ಲಿ 15 ದಿನ ಹಾಗೂ ಗ್ರಾಮೀಣ ಪ್ರದೇಶದಲ್ಲಿ 30 ದಿನದೊಳಗೆ ವಿದ್ಯುತ್‌ ಸಂಪರ್ಕ ನೀಡಬೇಕು ಅಥವಾ ಇರುವ ಸಂಪರ್ಕವನ್ನು ಬದಲಿಸಿಕೊಡಬೇಕು. ಇನ್ನು ಹೊಸ ಸಂಪರ್ಕ, ವರ್ಗಾವಣೆ, ರಿಪೇರಿ, ವಿದ್ಯುತ್‌ ಕಡಿತ ಇತ್ಯಾದಿ ಸಮಸ್ಯೆಗಳನ್ನು ಗ್ರಾಹಕರು ಬಗೆಹರಿಸಿಕೊಳ್ಳಲು ಆಪ್‌ ಆಧಾರಿತ ವ್ಯವಸ್ಥೆ ತರಬೇಕು ಎಂಬ ನೀತಿಗಳು ‘ವಿದ್ಯುತ್‌ ನಿಯಮಾವಳಿ-2020’ ರಲ್ಲಿ ಅಡಕವಾಗಿದೆ.

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 127 ಸೋಂಕಿತರ ಸ್ಥಳಾಂತರ

ನಾಳೆ ಭೈರಪ್ಪ, ಕಣವಿ, ತಿಮ್ಮಕ್ಕ ಸೇರಿ ಐವರಿಗೆ ಗೌರವ ಡಾಕ್ಟರೇಟ್ ಪ್ರದಾನ

12 ಕೋಟಿ ಲಾಟರಿ ಗೆದ್ದ ದೇಗುಲದ ಕ್ಲರ್ಕ್!

ಶ್ವೇತಭವನಕ್ಕೆ ವಿಷ ಪತ್ರ ಕಳುಹಿಸಿದ್ದ ಕೆನಡಾ ಮಹಿಳೆ ಸೆರೆ

2008ರ ಬೆಂಗಳೂರು ಸ್ಫೋಟ ಪ್ರಕರಣ: ಕೇರಳದಲ್ಲಿ ಆರೋಪಿ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!