Thursday, December 1, 2022

ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸಲಹೆ ಕೇಳಿದ ಶಿಕ್ಷಣ ಸಚಿವ

Follow Us

newsics.com
ಬೆಂಗಳೂರು: ಕೊರೋನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ವೇಳೆಯಲ್ಲಿ ಶಾಲೆಗಳ ಆರಂಭ ಕುರಿತಂತೆ ಸಲಹೆ ನೀಡುವಂತೆ ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ಸಚಿವರು ಮತ್ತು ವಿಧಾನಸಭಾ ಸದಸ್ಯರಿಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಸಂದಿಗ್ಧ ಸ್ಥಿತಿಯಲ್ಲಿ ಶಾಲೆಗಳ ಆರಂಭ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರಲಾಗುತ್ತಿಲ್ಲ. ಹೀಗಾಗಿ ಶಾಲೆಗಳನ್ನು ಯಾವಾಗ ಆರಂಭಿಬೇಕು. ಯಾವ ಶಾಲೆಗಳನ್ನು ಮೊದಲು ಪ್ರಾರಂಭಿಸಬಹುದು. ಸಮುದಾಯ ಮತ್ತು ಜನಪ್ರತಿನಿಧಿಗಳಿಂದ ಯಾವ ರೀತಿ ಸಹಕಾರ ನಿರೀಕ್ಷಿಸಬಹುದು. ಈ ಕುರಿತು ಸಲಹೆ, ಸೂಚನೆ ನೀಡುವಂತೆ ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ.
ಈ ಮೊದಲು ಪೋಷಕರಿಂದ ಶಾಲೆ ಆರಂಭದ ಬಗ್ಗೆ ಸಲಹೆ ಪಡೆದಿದ್ದ ಸರ್ಕಾರ, ಈಗ ಸಚಿವರು ಮತ್ತು ವಿಧಾನಸಭಾ ಸದಸ್ಯರಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ಶಾಲೆ ಯಾವಾಗ ಆರಂಭಿಸಬೇಕು, ಹೇಗೆ ಆರಂಭಿಸಬೇಕು, ಯಾವ್ಯಾವ ಮಾರ್ಗಸೂಚಿಗಳನ್ನು ಅನುಸರಿಸಬೇಕೆಂಬ ಬಗ್ಗೆ ಮಾಹಿತಿ ಪಡೆಯಲು ಸುರೇಶಕುಮಾರ್ ಅವರು ರಾಜ್ಯದ ಎಲ್ಲ ಸಚಿವರು, ವಿಧಾನಸಭಾ ಸದಸ್ಯರಿಗೆ ಪತ್ರ ಬರೆದಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ತಮ್ಮ ಸಲಹೆ-ಸೂಚನೆಗಳನ್ನು ಇ-ಮೇಲ್ ತಿಳಿಸುವಂತೆ ಕೋರಿದ್ದಾರೆ. ನಿಮ್ಮ ಸಲಹೆ-ಸೂಚನೆಗಳು ಶೈಕ್ಷಣಿಕವಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಕಾರಿಯಾಗಲಿದೆ.
ಎಸ್‌ಒಪಿ ಸಿದ್ಧ…
ಶಾಲೆಗಳನ್ನು ಪುನಾರಂಭಿಸಲು ಈಗಾಗಲೇ ಅವಶ್ಯವಿರುವ ಪೂರ್ವಸಿದ್ಧತೆ ಹಾಗೂ ಪ್ರಮಾಣಿತ ಕಾರ್ಯಚರಣಾ ವಿಧಾನಗಳನ್ನು (ಎಸ್‌ಒಪಿ) ಸಿದ್ಧಪಡಿಸಲಾಗಿದೆ. ಮಾರ್ಗಸೂಚಿ ಜತೆಗೆ ತಮ್ಮ ಸಲಹೆಗಳನ್ನು ಆಧರಿಸಿ ಶಾಲೆಗಳನ್ನು ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸುರೇಶಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ.
ಸೋಂಕಿನಿಂದಾಗಿ ಕಳೆದ ಮಾರ್ಚ್ ನಲ್ಲಿ ಮುಚ್ಚಿದ ಶಾಲೆಗಳನ್ನು ಇನ್ನೂ ತೆರೆಯಲು ಸಾಧ್ಯವಾಗಿಲ್ಲ. ಜೂನ್ ನಲ್ಲಿ ಆರಂಭವಾಗಬೇಕಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿಲ್ಲ. ಇದು ಹಲವು ಸಾಮಾಜಿಕ ಪಿಡುಗುಗಳಿಗೂ ಕಾರಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಲಹೆ ನೀಡುವಂತೆ ಪತ್ರದಲ್ಲಿ ಕೋರಿದ್ದಾರೆ.
ಕೊರೋನಾ ಸಾಂಕ್ರಾಮಿಕ ರೋಗದ ಪ್ರಸರಣ ದಿನದಿಂದ ದಿನಕ್ಕೆ ತೀವ್ರವಾಗುತ್ತಲೇ ಸಾಗಿದೆ. ಈ ಪರಿಸ್ಥಿತಿಯ ನಡುವೆಯೇ ಸಾಮಾಜಿಕ ಜೀವನ ಸಹಜ ಸ್ಥಿತಿಗೆ ಮರಳಬೇಕಿದೆ ಎಂದು ಅವರು ಹೇಳಿದ್ದಾರೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಶಾಲೆಗಳು ಆರಂಭಿಸಲಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತು ಅಭಿಪ್ರಾಯ ಸಂಗ್ರಹಿಸಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಲ್ಲಿ ಕೊರೋನಾ ಮರು ಸೋಂಕು; ಕೇಂದ್ರ ಆರೋಗ್ಯ ಸಚಿವ ಆತಂಕ

ಮತ್ತಷ್ಟು ಸುದ್ದಿಗಳು

vertical

Latest News

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

newsics.com ಬೆಂಗಳೂರು: ಬಿಜೆಪಿ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದ್ದು, ರೌಡಿಗಳಿಗೆ , ಪಾತಕಿಗಳಿಗೆ ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಈ ಪ್ರತಿಕ್ರಿಯೆ...

ಕೊರಿಯಾದ ಮಹಿಳಾ ಯು ಟ್ಯೂಬರ್ ಗೆ ಕಿರುಕುಳ: ಇಬ್ಬರು ಆರೋಪಿಗಳ ಬಂಧನ

newsics.com ಮುಂಬೈ: ಮಹಾ ನಗರ ಮುಂಬೈನ ಖಾರ್ ಪ್ರದೇಶದಲ್ಲಿ ಸಾವಿರಾರು ಜನರ ಮುಂದೆ ಕೊರಿಯಾದ ಯೂ ಟ್ಯೂಬರ್ ಗೆ ಕಿರುಕುಳ ನೀಡಿದ  ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಶೇಕ್ ಮತ್ತು  ಮೊಹಮ್ಮದ್...

ಮಂಗಳೂರು ಸ್ಫೋಟ ಪ್ರಕರಣ: ಎನ್ ಐ ಎ ಗೆ ತನಿಖೆ ಅಧಿಕೃತ ಹಸ್ತಾಂತರ

newsics.com ಮಂಗಳೂರು: ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಮಂಗಳೂರು ಸ್ಫೋಟ ಪ್ರಕರಣದ ತನಿಖೆಯನ್ನು ಇದೀಗ ಅಧಿಕೃತವಾಗಿ ರಾಷ್ಟ್ರೀಯ ತನಿಖಾ ದಳ ಎನ್ ಐ ಎ ಗೆ ಹಸ್ತಾಂತರಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಈ ಸಂಬಂಧ...
- Advertisement -
error: Content is protected !!