Saturday, November 27, 2021

ಒಂದೇ ದಿನ ಐವರಿಗೆ ಕೊರೋನಾ; ಸೋಂಕಿತರ ಸಂಖ್ಯೆ 20ಕ್ಕೇರಿಕೆ

Follow Us

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಒಂದೇ ದಿನ ಐವರಿಗೆ ಕೋವಿಡ್-19 ಇರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 300ಕ್ಕೆ ಏರಿಕೆಯಾಗಿದೆ.
ದುಬೈನಿಂದ ನಿನ್ನೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಟ್ಯಾಕ್ಸಿ ಮಾಡಿಕೊಂಡು ಮೈಸೂರಿಗೆ ತೆರಳಿದ್ದ ವ್ಯಕ್ತಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ .ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಮೂವರು ಹಾಗೂ ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಒಬ್ಬ ವ್ಯಕ್ತಿಯಲ್ಲಿ ಮತ್ತು ಮೈಸೂರಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ ಎಂದು ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಸರ್ಕಾರಿ ಕಚೇರಿಗಳು ಹಾಗೂ ಮುಖ್ಯ ಸ್ಥಳಗಳಲ್ಲಿ ಥರ್ಮಲ್ ಟೆಸ್ಟ್ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ. ಕೋವಿಡ್-19 ರೋಗಪೀಡಿತರಿಗೆ, ಮನೆ ಮತ್ತು ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳಿಗೆ ಮಾನಸಿಕ ಆರೋಗ್ಯ ಸಮಾಲೋಚನೆ ನಡೆಸಲಾಗುತ್ತಿದೆ. ಇದುವರೆಗೆ 4390 ಕೌನ್ಸಲಿಂಗ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!