Sunday, December 5, 2021

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 91 ಕ್ಕೇರಿಕೆ

Follow Us

ಬಳ್ಳಾರಿ/ಬೆಂಗಳೂರು: ಬಳ್ಳಾರಿಯಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ದೃಢವಾಗಿರುವ ಮಾಹಿತಿ ಲಭ್ಯವಾಗಿದೆ. ಈ ಮೂಲಕ ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಗೆ ತುತ್ತಾದವರ ಸಂಖ್ಯೆ ಸೋಮವಾರ 91ಕ್ಕೆ ಏರಿಕೆಯಾಗಿದೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಕುಟುಂಬವೊಂದರ ಮೂವರಿಗೆ ಕೊರೊನಾ ಸೋಂಕು ಧೃಡವಾಗಿರುವುದು ವೈದ್ಯಕೀಯ ಪರೀಕ್ಷೆಯಿಂದ ಸ್ಪಷ್ಟವಾಗಿದೆ.
ಆರೋಗ್ಯ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ‘ರಾಜ್ಯದಲ್ಲಿ ಹೊಸದಾಗಿ ಐವರಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ ನಂಜನಗೂಡಿನ ನಾಲ್ವರು ಮತ್ತು ತುಮಕೂರಿನ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ 88 ಪ್ರಕರಣ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿತ್ತು. ಆದರೆ ಈಗ ಬಳ್ಳಾರಿಯ
3 ಹೊಸ ಪ್ರಕರಣ ಸೇರಿ 91ಕ್ಕೆ ಏರಿಕೆಯಾಗಿದೆ,
ಬೆಂಗಳೂರು- 41, ಮೈಸೂರು- 12, ಚಿಕ್ಕಬಳ್ಳಾಪುರ- 8, ದಕ್ಷಿಣ ಕನ್ನಡ- 7, ಉತ್ತರ ಕನ್ನಡ- 7, ಕಲಬುರಗಿ- 3, ಬಳ್ಳಾರಿ- 3, ದಾವಣಗೆರೆ- 3, ಉಡುಪಿ- 3, ತುಮಕೂರು 2, ಕೊಡಗು- 1, ಧಾರವಾಡದಲ್ಲಿ ಒಬ್ಬರಿಗೆ ಸೋಂಕು ಇರುವುದು ಧೃಡಪಟ್ಟಿದೆ. ಇದರಲ್ಲಿ ಕೇವಲ 5 ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!