Sunday, December 5, 2021

ಕೊರೋನಾ ಸೋಂಕಿತರ ಸಂಖ್ಯೆ 64ಕ್ಕೇರಿಕೆ

Follow Us

ಬೆಂಗಳೂರು: ಕರ್ನಾಟಕದಲ್ಲಿ ಈವರೆಗೆ ಒಟ್ಟು 64 ಕೋವಿಡ್-19 ಸೋಂಕಿತ ಪ್ರಕರಣಗಳು ಖಚಿತವಾಗಿವೆ.
ಇಂದು ಒಂದೇ ದಿನ 9 ಸೋಂಕಿತ ಪ್ರಕರಣ ಪತ್ತೆಯಾಗಿದೆ. ತುಮಕೂರಿನ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಐವರು ಸಂಪೂರ್ಣವಾಗಿ ಗುಣಮುಖರಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಿಂದ ಅಧಿಕೃತವಾಗಿ ತಿಳಿದುಬಂದಿದೆ. ಯಾವುದೇ ದೇಶಕ್ಕೂ ಪ್ರಯಾಣಿಸಿರದ 10 ತಿಂಗಳ ಮಗುವಿಗೂ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 10 ತಿಂಗಳ ಗಂಡುಮಗುವನ್ನು ಕೆಲವು ದಿನಗಳ ಹಿಂದೆ ಪೋಷಕರು ಕೇರಳಕ್ಕೆ ಕರೆದುಕೊಂಡು ಹೋಗಿದ್ದರು. ಕೇರಳದಿಂದಲೇ ಮಗುವಿಗೆ ಸೋಂಕು ತಗುಲಿದೆಯಾ? ಅಥವಾ ಬೇರಾವುದಾದರೂ ಹಿನ್ನೆಲೆ ಇದೆಯಾ? ಎಂಬುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಹಸುಗೂಸು ಕೋರೊನಾ ಸೋಂಕಿನಿಂದ ಬಳಲುತ್ತಿದೆ. ಜ್ವರ ಹಾಗೂ ಶೀತದಿಂದ ಬಳಲುತ್ತಿದ್ದ ಈ ಮಗುವನ್ನು 23 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿನ ಗಂಟಲಿನ ದ್ರವ ಪರೀಕ್ಷೆ ವರದಿ ಬಂದಿದ್ದು, ಮಗುವಿಗೆ ಕೋರೊನಾ ಸೋಂಕು ಇರುವುದು ದೃಢಪಟ್ಟಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!