newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ (ಸೆ.18) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ದೊರೆತಿದೆ ಎಂದು ತಿಳಿದುಬಂದಿದೆ.
ಮಂಗಳವಾರ (ಸೆ.19) ಹೊಸ ಸಂಸತ್ತಿನಲ್ಲಿ ಆರಂಭವಾಗಲಿರುವ ವಿಶೇಷ ಅಧಿವೇಶನದಲ್ಲೇ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಸೋಮವಾರ ಸಂಜೆ ಸಂಸತ್ ವಿಶೇಷ ಅಧಿವೇಶನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ 100 ನಿಮಿಷಕ್ಕೂ ಹೆಚ್ಚು ಕಾಲ ನಡೆಯಿತು. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಪ್ರಹ್ಲಾದ್ ಜೋಶಿ ಮತ್ತು ಇತರ ಸಚಿವರು ಸಂಪುಟ ಸಭೆಗೂ ಮುನ್ನ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಬಗ್ಗೆ ನನಗೆ 3 ತಿಂಗಳ ಹಿಂದೆಯೇ ಗೊತ್ತಿತ್ತು: ಚಕ್ರವರ್ತಿ ಸೂಲಿಬೆಲೆ
ಎಗ್‌ರೈಸ್, ಕಬಾಬ್ ಕೊಟ್ಟಿಲ್ಲವೆಂದು ಅಂಗಡಿ ಮಾಲೀಕನ ಕತ್ತು ಸೀಳಿದ ಯುವಕ!
ಸನಾತನ ಧರ್ಮ ಬಟ್ಟೆ ಮಳಿಗೆ ವಂಚನೆ; ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR