Friday, January 21, 2022

ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭವಿಲ್ಲ- ಸುರೇಶಕುಮಾರ್

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್’ಕುಮಾರ್ ಹೇಳಿದ್ದಾರೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆಗಿನ ಮಹತ್ವದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭವಿಲ್ಲ ಎಂದರು.
ಶಾಲೆ ಆರಂಭದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ವಸತಿ ಶಾಲೆಗಳ ಆರಂಭ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಎರಡು ದಿನಗಳಲ್ಲಿ ಸಿಎಂಗೆ ವರದಿ ನೀಡಲಾಗುವುದು. ಸಿಎಂ ನಿರ್ಧಾರದ ನಂತರ ಶಾಲೆ ಆರಂಭದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ಶಾಲಾರಂಭಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆ, ಎಸ್ಡಿಎಂಸಿ ಹಾಗೂ ಖಾಸಗಿ ಶಾಲಾಡಳಿತ ಮಂಡಳಿಗಳ ಅಭಿಪ್ರಾಯ ಸಂಗ್ರಹಿಸಿ, ಮುಖ್ಯಮಂತ್ರಿಗಳಿಗೆ ವರದಿ ಅಲ್ಲಿಸಿ, ನಾಲ್ಕೈದು ದಿನದಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಸೇನಾಧಿಕಾರಿಗಳ ಹೆಸರಿನಲ್ಲಿ ವಂಚನೆ: ನಾಲ್ವರು ಕಳ್ಳರ ಬಂಧನ

ಲೋಕಸಭೆಗೆ ಪ್ರಧಾನಿ ಆಯ್ಕೆ ಪ್ರಶ್ನಿಸಿ ಅರ್ಜಿ: ವಿಚಾರಣೆ ಮುಂದೂಡಿಕೆ

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!