Tuesday, April 13, 2021

ದೇಶದಲ್ಲಿ ಮತ್ತೆ ಲಾಕ್’ಡೌನ್ ಇಲ್ಲ

ನವದೆಹಲಿ: ದೇಶದಲ್ಲಿ ಮತ್ತೆ ಲಾಕ್​ಡೌನ್​ ಘೋಷಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.
ಈ ಮೂಲಕ ಲಾಕ್ ಡೌನ್ ಬಗ್ಗೆ ದೇಶಾದ್ಯಂತ ಹರಡಿದ್ದ ವದಂತಿಗಳಿಗೆ ಪ್ರಧಾನಿ ಮೋದಿ ತೆರೆ ಎಳೆದಿದ್ದಾರೆ.
ಮಂಗಳವಾರ ಸಂಜೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಕೊರೋನಾ ವಿರುದ್ಧ ನಾವು ಹೋರಾಡುತ್ತಲೇ ಅನ್​ಲಾಕ್​ ಎರಡನೇ ಹಂತಕ್ಕೆ ಪ್ರವೇಶಿಸುತ್ತಿದ್ದೇವೆ ಎಂದು ಹೇಳಿದರು.
ನಾವು ಸರಿಯಾದ ವೇಳೆಗೆ ಲಾಕ್​ಡೌನ್​ ಮಾಡಿದ್ದೇವೆ. ಹೀಗಾಗಿ ಹಲವರ ಪ್ರಾಣ ಉಳಿಸಿದ್ದೇವೆ. ಆದರೆ ನಾವೀಗ ಲಾಕ್ ಡೌನ್ ನಿಯಮಗಳನ್ನು ಪಾಲಿಸಲೇಬೇಕಾಗಿದೆ. ಮಾಸ್ಕ್ ಧರಿಸಲೇಬೇಕಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಾಗಿದೆ. ಕಂಟೈನ್ಮೆಂಟ್​ ಝೋನ್​ಗಳಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜಾಗೃತಿ ಮೂಡಿಸಬೇಕಿದೆ ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!