Saturday, April 17, 2021

1-5ನೇ ತರಗತಿ ಮಕ್ಕಳಿಗೆ ಆಫ್’ಲೈನ್ ಕ್ಲಾಸ್ ಇಲ್ಲ; ಪರೀಕ್ಷೆ ನಡೆಸದೆ ಪಾಸ್ ಮಾಡಲು ಚಿಂತನೆ

newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀತಿಯಿಂದಾಗಿ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ ಲೈನ್ ಕ್ಲಾಸ್ ಆರಂಭಿಸದಿರಲು ನಿರ್ಧರಿಸಿರುವ ಸರ್ಕಾರ, ಈ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗಿದ್ದು, ರಾಜ್ಯದಲ್ಲಿಯೂ ಸೋಂಕು ಹೆಚ್ಚುವ ಆತಂಕ ಸೃಷ್ಟಿಯಾಗಿದೆ. ಈಗಾಗಲೇ 8ರಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುತ್ತಿದ್ದಾರೆ.
ಆದರೆ ಬೆಂಗಳೂರು, ಕೇರಳ ಗಡಿಭಾಗ ಹಾಗೂ ಮಹಾರಾಷ್ಟ್ರ ಗಡಿಭಾಗದ ಶಾಲೆಗಳಲ್ಲಿ ಕೇವಲ 9ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳು ಮಾತ್ರ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಈಗಾಗಲೇ ಬೆಂಗಳೂರು, ಬಳ್ಳಾರಿ, ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೋಂಕಿತ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿರುವುದನ್ನು ರಾಜ್ಯ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.
ಕೋವಿಡ್ ತಾಂತ್ರಿಕ ಸಮಿತಿ ಕೂಡ ಪ್ರಾಥಮಿಕ ಶಾಲೆಯನ್ನು ಸದ್ಯಕ್ಕೆ ಆರಂಭಿಸುವುದು ಬೇಡ ಎಂದು ಸಲಹೆ ನೀಡಿದೆ. ಕೇರಳ, ಮಹಾರಾಷ್ಟ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ನಿರ್ಧಾರಕ್ಕೆ ಬಂದಿದ್ದು, ರಾಜ್ಯದಲ್ಲಿಯೂ 1 ರಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಹದಿನೈದು ದಿನಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಗಮನಿಸಿ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!