newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲಾ-ಕಾಲೇಜು ಆರಂಭ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಪ್ರಧಾನಿ ಮೋದಿ ಸಭೆ ಬಳಿಕ ಮಾತನಾಡಿದ ಸಚಿವ ಡಾ,ಕೆ ಸುಧಾಕರ್, ಕೊರೋನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಈ ಸಂದರ್ಭದಲ್ಲಿ ಸದ್ಯಕ್ಕೆ ಶಾಲಾ ಕಾಲೇಜು ಆರಂಭವಾಗುವುದಿಲ್ಲ, ಶಾಲಾ ಕಾಲೇಜು ಆರಂಭದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿಲ್ಲ. ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಬೇಡ ಎಂದು ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗುವಂತಿಲ್ಲ ಎಂದು ರಾಜ್ಯ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ಕಡಿಮೆಯಾಗದ ಕಾರಣ, ಈಗಿನ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವುದು ಸುರಕ್ಷಿತವಲ್ಲ. ಹೀಗಾಗಿ ಸೆಪ್ಟೆಂಬರ್ 2020 ಅಂತ್ಯದವರೆಗೆ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳನ್ನು ಶಾಲೆ-ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದಿರಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ತೀರ್ಮಾನಿಸಿತ್ತು.
ರಾಜ್ಯದಲ್ಲಿ ಸದ್ಯಕ್ಕೆ ಶಾಲಾ ಕಾಲೇಜು ಆರಂಭವಿಲ್ಲ- ಸಚಿವ ಸುಧಾಕರ್
Follow Us