newsics.com
ಬೆಂಗಳೂರು: ಕೊರೋನಾ ಅಬ್ಬರ ಹಿನ್ನೆಲೆಯಲ್ಲಿ ಸೆ.21ರಿಂದ ಶಾಲಾ ಕಾಲೇಜು ತೆರೆಯುವುದಿಲ್ಲ. ಸೆ.30 ರವರೆಗೂ ಶಾಲಾ ಕಾಲೇಜುಗಳನ್ನು ತೆರೆಯದಿರಲು ಸರ್ಕಾರ ನಿರ್ಧರಿಸಿದೆ.
ಸೆ.30 ರ ವೇಳೆಗೆ ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಂಶಕರ್ ತಿಳಿಸಿದ್ದಾರೆ.
ಕೊರೊನಾ ಆತಂಕದ ನಡುವೆಯೂ ಸೆ.21 ರಿಂದ ಶಾಲಾ-ಕಾಲೇಜುಗಳ ಆರಂಭವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಸದ್ಯಕ್ಕೆ ಶಾಲಾ ಕಾಲೇಜು ಆರಂಭ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ ಸ್ಪಷ್ಟನೆ ನೀಡಿದೆ. ಕೊರೋನಾ ಕಡಿಮೆಯಾಗುವವರೆಗೆ (9 ರಿಂದ 12 ನೇ ತರಗತಿವರೆಗೆ) ಶಾಲಾ ಕಾಲೇಜು ಆರಂಭಿಸುವುದಿಲ್ಲ, ರಾಜ್ಯದಲ್ಲಿ ಕೇಂದ್ರದ ಮಾರ್ಗಸೂಚಿ ಅನ್ವಯಿಸದಿರಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂಡಳಿ ಸ್ಪಷ್ಟನೆ ನೀಡಿದೆ.
ಸೆಪ್ಟೆಂಬರ್ 21ರಿಂದ ದೇಶಾದ್ಯಂತ 9 ರಿಂದ 12ನೇ ತರಗತಿ ಶಾಲಾ-ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ರಾಜ್ಯ ಸರ್ಕಾರವೂ ಈ ನಿಟ್ಟಿನಲ್ಲಿ ಸಿದ್ಧತೆ ಆರಂಭಿಸಿತ್ತು. ಆದರೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೆ.30 ರವರೆಗೆ ಶಾಲಾ ಕಾಲೇಜು ತೆರೆಯದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೇಂದ್ರ ಸರ್ಕಾರ ಸೆ.21ರಿಂದ 9ರಿಂದ 12ನೇ ತರಗತಿಯವರೆಗೆ ಶಾಲೆ ತೆರೆದು ಮಾರ್ಗದರ್ಶನ ನೀಡಲು ಅವಕಾಶ ಕಲ್ಪಿಸಿಕೊಡುವಂತೆ ಸೂಚಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವುದರಿಂದ ಶಾಲೆ ತೆರೆಯಲು ಅವಕಾಶ ನೀಡದಿರಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ರಾಜ್ಯದಲ್ಲಿ ಕೋವಿಡ್ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಶಾಲಾ ಅಥವಾ ಕಾಲೇಜಿಗೆ ಭೇಟಿ ನೀಡಲು ಅನುಮತಿಯಿಲ್ಲ. ಕೇಂದ್ರ ಸರಕಾರದ ಆದೇಶದ ಪ್ರಕಾರ 9, 10, 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗೆ ಹೋಗಿ ಶಿಕ್ಷಕರ ಬಳಿ ಅನುಮಾನಗಳನ್ನು ಬಗೆಹರಿಸಿಕೊಳ್ಳುವ ಅವಕಾಶ ಇತ್ತು. ಆದರೇ ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವುದರಿಂದ ಈಗಿನ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬರುವುದು ಕ್ಷೇಮಕರವಲ್ಲ ಎಂದು ತಿಳಿಸಲಾಗಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಕಂಟೇನ್ಮೆಂಟ್ ವಲಯ ಹೊರತುಪಡಿಸಿ 9ರಿಂದ 12ನೇ ತರಗತಿಗಳನ್ನು ತೆರೆದು ವಿದ್ಯಾರ್ಥಿಗಳ ಸಂದೇಶ ಪರಿಹಾರಕ್ಕಾಗಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡುವಂತೆ ಸೂಚಿಸಿತ್ತು.
ರಾಜ್ಯದಲ್ಲಿ ಪ್ರಸ್ತುತ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕ್ಷೇಮಕರವಲ್ಲ ಎಂದು ಅಭಿಪ್ರಾಯಪಡಲಾಗಿದೆ.
ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ದೃಷ್ಟಿಯಿಂದ ಸೆಪ್ಟೆಂಬರ್ 21ರಿಂದ ಶಾಲೆ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವರು ನಿನ್ನೆಯಷ್ಟೇ ತಿಳಿಸಿದ್ದರು. ಆದರೆ, ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆ ಈ ಆದೇಶವನ್ನು ಸರ್ಕಾರ ಇಂದು ಹಿಂಪಡೆದಿದೆ. ಅಲ್ಲದೇ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೂ ಶಾಲಾ ಕಾಲೇಜು ತೆರೆಯದಿರಲು ನಿರ್ಧಾರ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಪ್ರಕಟಣೆ ಹೊರಡಿಸಿದ್ದಾರೆ. ನಿನ್ನೆ ಮೈಸೂರಿನಲ್ಲಿ ಮಾತನಾಡಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸೆಪ್ಟೆಂಬರ್ 21 ರಿಂದ ಶಾಲೆ ಪ್ರಾರಂಭಿಸಲಾಗುವುದು. ಆದರೆ, ತರಗತಿಗಳು ನಡೆಯುವುದಿಲ್ಲ. ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಉಳಿದ ಕಡೆಗಳಲ್ಲಿ 9ನೇ ತರಗತಿಯಿಂದ 12ನೇ ತರಗತಿಯವರೆಗೆ ವಿಶೇಷ ತರಗತಿಗಳು ಮಾತ್ರ ನಡೆಯುತ್ತವೆ. ಶಾಲೆಗೆ ಬರುವ ವಿದ್ಯಾರ್ಥಿಗಳು ಪೋಷಕರ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ತರಬೇಕು. ಈ ವೇಳೆ ದಾಖಲಾತಿ ಪ್ರಕ್ರಿಯೆ ನಡೆಯಲಿದ್ದು, ಶಿಕ್ಷಕರ ಹಾಜರಾತಿ ಕಡ್ಡಾಯ ಎಂದು ತಿಳಿಸಿದ್ದರು.
ಬೆಂಗಳೂರಿನಲ್ಲಿ 3733, ರಾಜ್ಯದಲ್ಲಿ 8364 ಮಂದಿಗೆ ಸೋಂಕು, 114 ಬಲಿ
ನಿದ್ರೆ ಮಾಡಲು ಬಿಡುತ್ತಿಲ್ಲ ಕೋವಿಡ್ ಸೋಮ್ನಿಯಾ!
2 ಸಾವಿರ ಮುಖಬೆಲೆಯ ನೋಟು ಮುದ್ರಣ ಸ್ಥಗಿತವಿಲ್ಲ
ಮಹಿಳೆಯರ ಸುರಕ್ಷತೆಗೆ ಹೊಸ ದೂರವಾಣಿ ಸಂಖ್ಯೆ
ಅವಧಿಗೂ ಮುನ್ನವೇ ಮೊಟಕುಗೊಳ್ಳಲಿದೆ ಸಂಸತ್ ಅಧಿವೇಶನ
ಬ್ಯಾಗ್ನಲ್ಲಿ ಗನ್ ಪತ್ತೆ ಜೆಡಿಎಸ್ ನಾಯಕ ಆನಂದ ಅಸ್ನೋಟಿಕರ್ ಪೊಲೀಸ್ ವಶಕ್ಕೆ
ಸಂಜನಾ ಧರ್ಮ ಬದಲಾಯಿಸಿದ್ದಾರೆಯೇ? ಹರಿದಾಡುತ್ತಿದೆ ದಾಖಲೆ