Wednesday, May 25, 2022

ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವ ಪರಿಸ್ಥಿತಿ ಇಲ್ಲ- ಸಚಿವ ಸುರೇಶಕುಮಾರ್

Follow Us

newsics.com
ಬೆಂಗಳೂರು: ಅಕ್ಟೋಬರ್ 15ರ ನಂತರ ಶಾಲೆ ಆರಂಭಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ. ಹೀಗಾಗಿ ಶಾಲೆ ತೆರೆಯಲು ಸರ್ಕಾರಕ್ಕೆ ಯಾವುದೇ ಧಾವಂತ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದ್ದಾರೆ.
ಕೋವಿಡ್ ಹರಡುತ್ತಿರುವ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವ ಧಾವಂತ, ಪ್ರತಿಷ್ಠೆ ಸರ್ಕಾರಕ್ಕೆ ಇಲ್ಲ. ಮಕ್ಕಳ ಹಿತಕ್ಕೆ ಧಕ್ಕೆ ಆಗಬಹುದಾದ ಯಾವುದೇ ನಿರ್ಧಾರವನ್ನೂ ತೆಗೆದುಕೊಳ್ಳುವುದಿಲ್ಲ. ಪೋಷಕರು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ.
ಶಾಲೆಗಳನ್ನು ಆರಂಭಿಸುವ ಕುರಿತು ಪ್ರಾಥಮಿಕ ಶಾಲೆ, ಪ್ರೌಢಶಾಲೆ ಶಿಕ್ಷಕರ ಸಂಘಟನೆಗಳು ಹಾಗೂ ಪದವಿಪೂರ್ವ ಉಪನ್ಯಾಸಕರ ಸಂಘಗಳ ಜಿಲ್ಲಾ ಪ್ರತಿನಿಧಿಗಳ ಜತೆ ಗುರುವಾರ ವೆಬಿನಾರ್ ಸಂವಾದದಲ್ಲಿ ಮಾತನಾಡಿದ ಅವರು, ‘ನಾನು ಶಿಕ್ಷಣ ಸಚಿವ ಎಂಬುದಕ್ಕಿಂತ ರಾಜ್ಯದ ಎಲ್ಲ ಶಾಲಾ ಮಕ್ಕಳ ಪೋಷಕನೂ ಆಗಿದ್ದೇನೆ ಎಂಬ ಅಂಶವೇ ಪ್ರಮುಖವಾಗಿದೆ. ಎಲ್ಲ ಪೋಷಕರಂತೆ ನನಗೂ ಆತಂಕವಿದೆ. ಹೀಗಾಗಿ, ಸಾರ್ವಜನಿಕರ ಅಭಿಪ್ರಾಯ ಆಲಿಸುವ ಕೆಲಸ ಆರಂಭಿಸಲಾಗಿದೆ ಎಂದರು.
ಮುಂದೆ ಶಾಲೆಗಳನ್ನು ಆರಂಭಿಸಬೇಕಾಗ ಬಹುದೆಂಬ ದೃಷ್ಟಿಯಿಂದ ಕೆಲವು ಎಸ್‌ಒಪಿಗಳನ್ನು ಸಿದ್ಧಪಡಿಸಿಕೊಳ್ಳಲಾಗಿತ್ತು. ಆದರೆ, ಅದು ಶಾಲಾರಂಭದ ಸಿದ್ಧತೆ ಎಂದು ಕೆಲವರು ಭಾವಿಸಿದ್ದಾರೆ. ಅದು ಸರಿಯಲ್ಲ ಎಂದರು.
ಶೀಘ್ರದಲ್ಲಿ ಸಂಸದರು, ಶಾಸಕರು, ಶಿಕ್ಷಣ ತಜ್ಞರು, ಪೋಷಕ ಸಂಘಟನೆಗಳು, ಶಿಕ್ಷಣ ಪ್ರೇಮಿಗಳು, ಖಾಸಗಿ ಶಾಲಾ ಸಂಸ್ಥೆಯವರು ಹೀಗೆ ಶಿಕ್ಷಣ ಕ್ಷೇತ್ರದ ಎಲ್ಲ ಪಾಲುದಾರರೊಂದಿಗೆ ಚರ್ಚಿಸಲಾಗುವುದು ಎಂದು ಸುರೇಶಕುಮಾರ್ ಹೇಳಿದರು.
ಚಂದನ ಚಾನಲ್‌ನ ಸೇತುಬಂಧ, ವಿದ್ಯಾಗಮ, ಯೂ-ಟ್ಯೂಬ್, ಆನ್‌ಲೈನ್‌ ತರಗತಿಗಳು ನಮ್ಮ ಮಕ್ಕಳ ಕಲಿಕೆಯ ನಿರಂತರತೆಗೆ ಮಾತ್ರ ಉಪಯೋಗವಾಗುತ್ತಿವೆ. ಆದರೆ, ಶಾಲಾ ತರಗತಿ ಕಲಿಕೆಯಷ್ಟು ಯಾವುದೇ ಕಲಿಕಾ ವಿಧಾನ ಪರಿಣಾಮಕಾರಿಯಲ್ಲ. ಆದರೂ ಶಾಲಾರಂಭದ ಆಲೋಚನೆ‌ ಸದ್ಯಕ್ಕೆ ನಮ್ಮ ಮುಂದೆ ಇಲ್ಲ ಎಂದರು.
ಶಾಲೆಗಳು ಆರಂಭವಾಗದಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿ, ಜೂಜಾಟದಲ್ಲಿ ತೊಡಗುವಿಕೆಯಂತಹ ಸಾಮಾಜಿಕ ಪಿಡುಗುಗಳು ಹೆಚ್ಚಿವೆ. ಹೀಗಾಗಿ ಶಾಲೆಗಳನ್ನು ಅದರಲ್ಲೂ ವಿಶೇಷವಾಗಿ 10 ರಿಂದ 12ನೇ ತರಗತಿಗಳನ್ನಾದರೂ ಆರಂಭಿಸುವುದು ಉತ್ತಮ. ನಂತರ ಎಲ್ಲ ಮುಂಜಾಗ್ರತೆಯೊಂದಿಗೆ 7-10ನೇ ತರಗತಿಗಳನ್ನು ಆರಂಭಿಸುವುದು ಉತ್ತಮ. ಕೋವಿಡ್ ಇಲ್ಲದ ಪ್ರದೇಶಗಳಲ್ಲಿ ಶಾಲೆಗಳನ್ನು ತೆರೆಯಬಹುದು ಎಂದು ಹಲವು ಶಿಕ್ಷಕರು ಅಭಿಪ್ರಾಯಪಟ್ಟರು.

ಮತ್ತಷ್ಟು ಸುದ್ದಿಗಳು

Latest News

ಮಹಿಳೆಯರ ಟಿ 20 ಚಾಲೆಂಜ್​ನಲ್ಲಿ ಮಾಯಾ ವಿಚಿತ್ರ ಬೌಲಿಂಗ್​ : ವಿಡಿಯೋ ವೈರಲ್

newsics.com ಮಹಿಳಾ ಟಿ 20 ಚಾಲೆಂಜ್​ನಲ್ಲಿ ಸೂಪರ್​ನೋವಾಸ್​ ವಿರುದ್ಧದ ಪಂದ್ಯದಲ್ಲಿ ಬೌಲರ್​​ ಮಾಯಾ ಸೋನಾವಾನೆ ವಿಚಿತ್ರವಾಗಿ ಬೌಲಿಂಗ್​ ಮಾಡುವ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಸಖತ್​​ ವೈರಲ್​ ಆಗಿದೆ. ಮಾಯಾ...

ಮಳಲಿ ಮಸೀದಿಯಲ್ಲಿ ದೇಗುಲ ಕುರುಹು ಪತ್ತೆ ವಿವಾದ : ತಾಂಬೂಲ ಪ್ರಶ್ನೆಗೆ ಕ್ಷಣಗಣನೆ

newsics.com ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ ತಾಂಬೂಲ ಪ್ರಶ್ನೆ ಆಯೋಜಿಸಿದೆ. ಹಿಂದೂ ಧರ್ಮದ...

ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ

newsics.com ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್​ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್​ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್​ ಹೆಗ್ಡೆ ಹೆಸರನ್ನು ಬಿಹಾರ ಸಿಎಂ ನಿತೀಶ್​ ಕುಮಾರ್...
- Advertisement -
error: Content is protected !!