Monday, April 12, 2021

ಕೇಂದ್ರ ಸರ್ಕಾರಿ ನೌಕರರ ವೇತನ ಕಡಿತ ಪ್ರಸ್ತಾಪವಿಲ್ಲ- ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನ ಕಡಿತದ ಪ್ರಸ್ತಾಪವೇ ಇಲ್ಲ. ಇದೆಲ್ಲ ಸುಳ್ಳು ಸುದ್ದಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.
ಕೊರೋನಾ ನಿಯಂತ್ರಣಕ್ಕಾಗಿ 40 ದಿನಗಳಿಂದ ದೇಶಾದ್ಯಂತ ಲಾಕ್ ಡೌನ್ ಹೇರಲಾಗಿದೆ. ಇದರಿಂದ ದೇಶದಲ್ಲಿ ಆರ್ಥಿಕ ಮುಗ್ಗಟ್ಟು ಉಂಟಾಗಿದೆ. ಈ ಮಧ್ಯೆ ಅನೇಕ ಖಾಸಗಿ ಕಂಪನಿಗಳು, ರಾಜ್ಯ ಸರ್ಕಾರಗಳು ನೌಕರರ ವೇತನಕ್ಕೆ ಕತ್ತರಿ ಹಾಕಿವೆ. ಇದೇ ಮಾದರಿಯಲ್ಲೇ ಕೇಂದ್ರ ಸರ್ಕಾರಿ ನೌಕರರ ವೇತನ ಕೂಡ ಕಡಿತಗೊಳಿಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸರ್ಕಾರಿ ನೌಕರ ವೇತನ ಕಡಿತಗೊಳಿಸಲಾಗುತ್ತದೆ ಎಂಬ ಸುದ್ದಿ ಸುಳ್ಳು. ಇಂತಹ ಯಾವುದೇ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದೆ ಇಲ್ಲ. ಯಾವುದೇ ನೌಕರರ ವೇತನವನ್ನು ಕಡಿತಗೊಳಿಸುವುದೂ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!