Saturday, April 17, 2021

ಇದೇ ಮೊದಲಲ್ಲ, ನನ್ನನ್ನು 6 ಬಾರಿ ಸಾಯಿಸಿದ್ದಾರೆ…!

ಚೆನ್ನೈ: “ನನ್ನನ್ನು ಸಾಯಿಸುತ್ತಿರುವುದು ಇದೇ ಮೊದಲೇನಲ್ಲ. ಈಗಾಗಲೇ ಆರು ಬಾರಿ ನನ್ನನ್ನು ಸಾಯಿಸಿದ್ದಾರೆ‌…”
ಹೀಗೆಂದು ಗಾನಕೋಗಿಲೆ ಎಸ್. ಜಾನಕಿಯಮ್ಮ ನೋವು ವ್ಯಕ್ತಪಡಿಸಿದ್ದಾರೆ. ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಎಸ್‌.ಜಾನಕಿಯವರ ನಿಧನದ ಸುದ್ದಿ ಹಬ್ಬಿಸಲಾಗುತ್ತಿದ್ದು, ಈ ಬಗ್ಗೆ ಬೇಸರ ವ್ಯಕ್ತಪಡಿಸಿದ ಜಾನಕಿಯಮ್ಮ, ನನ್ನ ಸಾವಿನ‌ ಬಗ್ಗೆ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದು ಮೊದಲೇನಲ್ಲ. ಈ ರೀತಿಯ ಸುದ್ದಿ ಬಂದರೆ ಸ್ಪಷ್ಟನೆ ಪಡೆಯಿರಿ ಎಂದು ಜಾನಕಿಯಮ್ಮ ಮನವಿ ಮಾಡಿದ್ದಾರೆ ‌.
ಇತ್ತೀಚೆಗಷ್ಟೇ ‘ಎಸ್.ಜಾನಕಿ ನಿಧನ’ ಎಂಬ ಸುದ್ದಿ‌ ಸೋಷಿಯಲ್ ‌ಮೀಡಿಯಾದಲ್ಲಿ ಹರಿದಾಡಿತ್ತು. ಈ ವಿಚಾರ ನೋಡಿದ ಎಲ್ಲರೂ ಆತಂಕಕ್ಕೊಳಗಾಗಿದ್ದು ಸ್ವತಃ ಎಸ್ ಪಿ ಬಿ ಕರೆ‌ಮಾಡಿ ‌ತಮ್ಮ ಆರೋಗ್ಯ ವಿಚಾರಿಸಿದ್ದರು ಎನ್ನುವ ಸಂಗತಿಯನ್ನು ಸಂಗತಿಯನ್ನು ಅವರು ಹಂಚಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!