Monday, September 27, 2021

ವಿಮಾನದಲ್ಲಿ ಬಂದು ಬೆಂಗಳೂರಲ್ಲಿ ಬೈಕ್ ಕಳವು ಮಾಡುತ್ತಿದ್ದ ಮೂವರ ಬಂಧನ

Follow Us

newsics.com

ಬೆಂಗಳೂರು: ದ್ವಿಚಕ್ರ ವಾಹನ ಕದ್ದು ಮಾರಾಟ ಮಾಡಿ ಅದರಿಂದ ಬಂದ ಹಣದಲ್ಲಿ ಯುಟ್ಯೂಬ್‌ ಚಾನೆಲ್‌ ಹಾಗೂ ಆಲ್ಪಂ ಸಾಂಗ್ಸ್‌ ತಯಾರಿಸುತ್ತಿದ್ದ ರಾಜಸ್ಥಾನದ ಯುಟ್ಯೂಬ್‌ ಹೀರೋ ಸೇರಿ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಈ ತಂಡ ರಾಜಸ್ಥಾನಕ್ಕೆ ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕಳ್ಳತನ ಮಾಡುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನ ಮೂಲದ ವಿಕಾಸ್‌ ಕುಮಾರ್‌ ಅಲಿಯಾಸ್‌ ವಿಕ್ಕಿ ಬಿಶೋನಾಯ್‌ (26), ಧವಳ್‌ ದಾಸ್‌(28) ಮತ್ತು ದಶರಥ (30) ಬಂಧಿತರು. ಅವರಿಂದ 32.70 ಲಕ್ಷ ರೂ. ಮೌಲ್ಯದ ದುಬಾರಿ ಮೌಲ್ಯದ ಕೆಟಿಎಂ, ಬುಲೆಟ್‌, ಪಲ್ಸರ್‌ ಸೇರಿ ವಿವಿಧ ಮಾದರಿಯ 26 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ವಿಕಾಸ್‌ ಕುಮಾರ್‌ 3 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮೆಕ್ಯಾನಿಕ್‌ ಆಗಿದ್ದ. ಕೊರೋನಾ ಕಾರಣದಿಂದ ರಾಜಸ್ಥಾನಕ್ಕೆ ಹೋಗಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಧವಳದಾಸ್‌ ಮತ್ತು ದಶರಥ ಹಾರ್ಡ್‌ವೇರ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರು. ವಿಕಾಸ್‌ ಕುಮಾರ್‌ ಮೆಕ್ಯಾನಿಕ್‌ ಆಗಿದ್ದರಿಂದ ಬೈಕ್‌ ಕಳವು ಮಾಡುವಂತೆ ಸ್ನೇಹಿತರನ್ನು ಪ್ರಚೋದಿಸುತ್ತಿದ್ದ. ವಿಕಾಸ್‌ ಕುಮಾರ್‌ ರಾಜಸ್ಥಾನದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾನೆ.

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!