ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ತಾಪಮಾನ ಏರಿಕೆ ಹಾಗೂ ಅರಬ್ಬಿ ಸಮುದ್ರ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಮಳೆಯಾಗಿದ್ದು, ಇನ್ನು 2-3 ದಿನ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾದರೆ ಮೇ 26ರ ಬಳಿಕ ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ವಾಯುಭಾರ ಕುಸಿತ ಉಂಟಾದರೆ ಮೇ 26ರಿಂದ 31ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಕೆಎಸ್ಎನ್ಡಿಎಂಸಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.