Saturday, April 17, 2021

ರಾಜ್ಯದಲ್ಲಿ ಕೊರೋನಾಕ್ಕೆ ಮತ್ತೆ ಮೂರು ಬಲಿ, 127 ಮಂದಿಗೆ ಸೋಂಕು

ಬೆಂಗಳೂರು:  ಮಾರಕ ಕೊರೋನಾಕ್ಕೆ ರಾಜ್ಯದಲ್ಲಿ ಮತ್ತೆ ಮೂವರು ಬಲಿಯಾಗಿದ್ದಾರೆ. ಬಳ್ಳಾರಿ, ವಿಜಯಪುರ ಮತ್ತು ಬೆಂಗಳೂರಿನಲ್ಲಿ ತಲಾ ಒಬ್ಬರು ಕೊರೋನಾಕ್ಕೆ ಬಲಿಯಾಗಿದ್ದಾರೆ. ಇದೇ ವೇಳೆ ಕೊರೋನಾ ಸೋಂಕಿನ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ.  127 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಮಂಡ್ಯದಲ್ಲಿ ದಾಖಲೆ 62 ಮಂದಿಯಲ್ಲಿ ಹೊಸದಾಗಿ ರೋಗ ಲಕ್ಷಣ ಕಾಣಿಸಿಕೊಂಡಿದೆ.  ಶಿವಮೊಗ್ಗದಲ್ಲಿ 12, ಕಲಬುರ್ಗಿಯಲ್ಲಿ 11, ದಾವಣಗೆರೆಯಲ್ಲಿ  19 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಕೊರೋನಾ ಸೋಂಕು ಕಾಣಿಸಿಕೊಂಡ 127 ಮಂದಿಯಲ್ಲಿ 15 ಮಕ್ಕಳು ಕೂಡ ಸೇರಿದ್ದಾರೆ.  ಬೆಂಗಳೂರಿನಲ್ಲಿ 6,  ಉಡುಪಿಯಲ್ಲಿ  4 . ಉತ್ತರ ಕನ್ನಡದಲ್ಲಿ 4 ಮತ್ತು ಹಾಸನದಲ್ಲಿ ಹೊಸದಾಗಿ 3 ಪ್ರಕರಣ ವರದಿಯಾಗಿದೆ.ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇದೀಗ 1373ಕ್ಕೆ ಏರಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!