Saturday, November 26, 2022

ಮೂವರು ಪೊಲೀಸರನ್ನು ಹತ್ಯೆ ಮಾಡಿದ ಎಲ್ ಇ ಟಿ ಉಗ್ರನನ್ನು ಹೊಡೆದುರುಳಿಸಿದ ಭದ್ರತಾಪಡೆ

Follow Us

newsics.com

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭದ್ರತಾಪಡೆ ಮಹತ್ವದ ಯಶಸ್ಸು ಗಳಿಸಿದೆ. ಸೋಪೋರ್ ನಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಎಲ್ ಇ ಟಿ ಸಂಘಟನೆಯ ಸಕ್ರಿಯ ಸದಸ್ಯ ಹಾಗೂ ಮೂವರು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ ಉಗ್ರನನ್ನು ಭದ್ರತಾಪಡೆ ಹೊಡೆದುರುಳಿಸಿದೆ.

ಉಗ್ರ ಮುದಾಸಿರ್ ಪಂಡಿತ್ ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್ ಗಳು ಮತ್ತು ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದ ಎಂದು ಐಜಿಪಿ ವಿಜಯ ಕುಮಾರ್ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದ್ದು, ಮೂವರು ಉಗ್ರರು ಹತರಾಗಿದ್ದಾರೆ.

ಎಲ್ ಇ ಟಿ ಸಂಘಟನೆಯ ಮೂವರು ಉಗ್ರರು ಹತರಾಗಿರುವುದರಿಂದ ಜಮ್ಮು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಂಚನ್ನು ಈ ಮೂಲಕ ವಿಫಲಗೊಳಿಸಲಾಗಿದೆ

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!