Monday, April 12, 2021

ಟಿಕ್ ಟಾಕ್ ಸೇರಿ 59 ಚೀನಾ ಆಪ್ ನಿಷೇಧಿಸಿದ ಕೇಂದ್ರ

ನವದೆಹಲಿ: ಟಿಕ್ ಟಾಕ್ ಸೇರಿ 59 ಚೀನಾ ಆಪ್ ಗಳನ್ನು ಭಾರತದಲ್ಲಿ ನಿಷೇಧಿಸಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಡೇಟಾವನ್ನು ತಿರುಗಿಸುವ ಮತ್ತು ಗೌಪ್ಯತೆ ಸಮಸ್ಯೆಗಳಿರುವ ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಲು ಭಾರತ ಸರ್ಕಾರ ನಿರ್ಧರಿಸಿದೆ.
ಕೊರೋನಾ, ಗಾಲ್ವಾನ್ ಘರ್ಷಣೆ ಬಳಿಕ ಭಾರತ ಚೀನಾ ಸಂಬಂಧ ಹದಗೆಟ್ಟ ಬೆನ್ನಲ್ಲೇ ಚೀನಾ ಆಪ್ ಗಳನ್ನು ನಿಷೇಧಿಸುವ ಮೂಲಕ ಚೀನಾಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಯುಸಿ ಬ್ರೌಸರ್, ಶೇರ್ ಇಟ್, ಹಲೋ, ಯುಕ್ಯಾಮ್ ಮೇಕ್ಅಪ್ ಸೇರಿದಂತೆ 59 ಆಪ್ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಆದೇಶ ಹೊರಡಿಸಿದೆ.
ಜನಪ್ರಿಯವಾಗಿರುವ ಟಿಕ್‌ಟಾಕ್ ಭಾರತದಲ್ಲಿ ಗರಿಷ್ಠ ಸಂಖ್ಯೆಯ ಬಳಕೆದಾರರನ್ನು ಹೊಂದಿದ್ದು, ಚೀನಾ ಮತ್ತು ಯುಎಸ್ ನಂತರದ ಸ್ಥಾನದಲ್ಲಿದೆ. 2020 ರ ಮೊದಲ ತ್ರೈಮಾಸಿಕದಲ್ಲಿ 1.5 ಬಿಲಿಯನ್ ಗಡಿ ದಾಟಿದ ಕೂಡಲೇ ಟಿಕ್‌ಟಾಕ್ 2 ಬಿಲಿಯನ್ ಗಡಿ ದಾಟಿದೆ. 2 ಬಿಲಿಯನ್‌ಗಳಲ್ಲಿ, ಭಾರತವು 611 ಮಿಲಿಯನ್‌ಗಿಂತಲೂ ಹೆಚ್ಚು ಡೌನ್‌ಲೋಡ್‌ಗಳನ್ನು ಹೊಂದಿರುವ ಅತಿದೊಡ್ಡ ಹಿಂಬಾಲಕರನ್ನು ಹೊಂದಿದೆ. TikTok, Shareit, Kwai, UC Browser, Baidu map, Shein, Clash of Kings, DU battery saver, Helo, Likee, YouCam makeup, Mi Community, CM Browers, Virus Cleaner, APUS Browser, ROMWE, Club Factory, Newsdog, Beutry Plus, WeChat, UC News, QQ Mail, Weibo, Xender, QQ Music, QQ Newsfeed, Bigo Live, SelfieCity, Mail Master, Parallel Space, Mi Video Call Xiaomi, WeSync, ES File Explorer, Viva Video QU Video Inc, Meitu, Vigo Video, New Video Status, DU Recorder, Vault- Hide, Cache Cleaner DU App studio, DU Cleaner, DU Browser, Hago Play With New Friends, Cam Scanner, Clean Master Cheetah Mobile, Wonder Camera, Photo Wonder, QQ Player, We Meet, Sweet Selfie, Baidu Translate, Vmate, QQ International, QQ Security Center, QQ Launcher, U Video, V fly Status Video, Mobile Legends, DU Privacy 59 ಚೀನಾ ಆಪ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!