Tuesday, April 13, 2021

ಸಬ್ಸಿಡಿ ದರದಲ್ಲಿ ಬೆಂಗಳೂರಲ್ಲೂ ತಿರುಪತಿ ಲಡ್ಡು

ತಿರುಪತಿ: ಶೀಘ್ರದಲ್ಲೇ ಬೆಂಗಳೂರು, ಚೆನ್ನೈ, ಹೈದರಾಬಾದ್​ ಮತ್ತು ಆಂಧ್ರಪ್ರದೇಶದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ತಿರುಪತಿ ಲಡ್ಡು ಪ್ರಸಾದ ಸಬ್ಸಿಡಿ ದರದಲ್ಲಿ ದೊರೆಯಲಿದೆ.
ತಿಮ್ಮಪ್ಪನ ದರ್ಶನ ಸಿಗದ ಭಕ್ತರಿಂದ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿರಿಸಿಕೊಂಡು ಮಂಡಳಿ ಈ ತೀರ್ಮಾನ ತೆಗೆದುಕೊಂಡಿದೆ ಎಂದು ಟಿಟಿಡಿ ಮಂಡಳಿಯ ಅಧ್ಯಕ್ಷ ವೈ.ವಿ.ಸುಬ್ಬಾ ರೆಡ್ಡಿ ತಿಳಿಸಿದ್ದಾರೆ.
ಭಕ್ತರು ಹೆಚ್ಚಿನ ಲಡ್ಡು ಪ್ರಸಾದ ಖರೀದಿಸಿ ಉಚಿತವಾಗಿ ಹಂಚುವುದಾದರೆ ಅದಕ್ಕೂ ಅವಕಾಶ ಕಲ್ಪಿಸಲಾಗಿದೆ. ಲಡ್ಡು ಪ್ರಸಾದಕ್ಕೆ 50 ರೂಪಾಯಿ ಇದ್ದರೂ, ಲಾಕ್​ಡೌನ್ ಕಾರಣಕ್ಕೆ ಸಬ್ಸಿಡಿ ದರವಾಗಿ 25 ರೂಪಾಯಿಗೆ ವಿತರಿಸಲಾಗುತ್ತಿದೆ ಎಂದು ರೆಡ್ಡಿ ತಿಳಿಸಿದ್ದಾರೆ.
ಟಿಟಿಡಿ ಮಾಹಿತಿ ಕೇಂದ್ರಗಳು, ಟಿಟಿಡಿ ಕಲ್ಯಾಣ ಮಂಟಪಗಳಲ್ಲಿ ಲಡ್ಡುಗಳು ಲಭ್ಯ ಇರಲಿವೆ. ಕಳೆದ ತಿಂಗಳು ಇ-ಹುಂಡಿ ಮೂಲಕ ಟಿಟಿಡಿಗೆ ಭಕ್ತರು 1.97 ಕೋಟಿ ರೂಪಾಯಿ ಕಾಣಿಕೆ/ದೇಣಿಗೆ ನೀಡಿದ್ದಾರೆ ಎಂದು ಸುಬ್ಬಾ ರೆಡ್ಡಿ ತಿಳಿಸಿದ್ದಾರೆ. ಬೃಹತ್‌ ಪ್ರಮಾಣದಲ್ಲಿ ಲಡ್ಡು ಬಯಸುವವರು 9849575952, 9701092777 ನಂಬರನ್ನು ಸಂಪರ್ಕಿಸಿ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!