Saturday, April 17, 2021

ನಾಳೆ ಐಸಿಎಸ್‌ಇ, ಐಎಸ್‌ಸಿ 10 ಮತ್ತು 12ನೇ ತರಗತಿ ಪರೀಕ್ಷೆ ರಿಸಲ್ಟ್

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್‌ 10ನೇ ತರಗತಿ ಐಸಿಎಸ್‌ಇ ಹಾಗೂ ಐಎಸ್‌ಸಿ 12ನೇ ತರಗತಿ ಪರೀಕ್ಷೆ ಫಲಿತಾಂಶ ಜುಲೈ 10ರಂದು ಮಧ್ಯಾಹ್ನ ಪ್ರಕಟವಾಗಲಿದೆ.
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಎಸ್ಸಿಇ) 2020 ರ ಜುಲೈ 10 ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ 10, 12 ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸುವುದಾಗಿ ಟ್ವೀಟ್ ಮಾಡಿದೆ.
CISCE, cisce.org, ‘results.cisce.org’ ಅಥವಾ examresults.net ವೆಬ್​ಸೈಟ್​ ನಲ್ಲಿ ಫಲಿತಾಂಶ ಪಡೆಯಬಹುದು. CISCE ನೀಡಿದ ಅಧಿಸೂಚನೆಯ ಪ್ರಕಾರ, ಶಾಲೆಗಳು ಪ್ರಾಂಶುಪಾಲರ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಮಂಡಳಿಯ ಕರಿಯರ್ ಪೋರ್ಟಲ್‌ ನಲ್ಲಿ ಲಾಗ್ ಇನ್ ಆಗುವ ಮೂಲಕ ಫಲಿತಾಂಶಗಳನ್ನು ನೋಡಬಹುದು.
ಮಾರ್ಚ್ 19 ರಿಂದ 31ರ ಅವಧಿಯಲ್ಲಿ ನಡೆಯಬೇಕಿದ್ದ ಐಸಿಎಸ್‌ಇ ಹಾಗೂ ಐಎಸ್‌ಸಿ ಎಲ್ಲಾ ಪರೀಕ್ಷೆಗಳನ್ನು ಕೊರೊನಾವೈರಸ್ ಭೀತಿಯಿಂದ ಮುಂದೂಡಲಾಗಿತ್ತು. ಜೂನ್ ತಿಂಗಳಿನಲ್ಲಿ ಈ ಬಗ್ಗೆ ಕೋರ್ಟಿಗೆ ಸ್ಪಷ್ಟನೆ ನೀಡಿದ ಸಿಐಎಸ್ಸಿಇ ಬೋರ್ಡ್, ಪರೀಕ್ಷೆಗಳನ್ನು ರದ್ದುಪಡಿಸಲು ಸಿದ್ಧವಾಗಿದ್ದು, ವಿದ್ಯಾರ್ಥಿಗಳಿಗೆ ಆಂತರಿಕ ಮೌಲೀಕರಣದ ಮೂಲಕ ಗ್ರೇಡ್ ನಿರ್ಧರಿಸಲಾಗುತ್ತದೆ ಎಂದಿತ್ತು.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!