Saturday, April 17, 2021

ರಾಜ್ಯದಲ್ಲಿ ಮುಂದುವರಿದ ಸಾರಿಗೆ ಮುಷ್ಕರ : ಖಾಸಗಿ ಬಸ್ ಗಳಿಂದ ಹಗಲು ದರೋಡೆ

newsics.com

ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರ ಸಂಘಟನೆ ಗಳು ಕರೆ ನೀಡಿರುವ ಮುಷ್ಕರ ಎರಡನೆ ದಿನವಾದ ಇಂದು ಕೂಡ ಮುಂದುವರಿದಿದೆ.

ಬೆಂಗಳೂರು, ಮೈಸೂರು, ಕಲಬುರ್ಗಿ , ಬೆಳಗಾವಿ  ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಮೈಸೂರಿನಲ್ಲಿ ಕೆ ಎಸ್ ಆರ್  ಟಿ  ಸಿ  ಬಸ್ ಸಂಚಾರ  ಸಂಪೂರ್ಣವಾಗಿ ಸ್ಥಗಿತಗೊಂಡಿದೆ..

ಸಾರಿಗೆ ಮುಷ್ಕರದ ಹೆಸರಿನಲ್ಲಿ ಖಾಸಗಿ ಬಸ್ ಮಾಲೀಕರು ಹಗಲು ದರೋಡೆಗೆ ಮುಂದಾಗಿದ್ದಾರೆ.

ಬೆಂಗಳೂರಿನಿಂದ  ಮೈಸೂರಿಗೆ ಪ್ರಯಾಣಿಕರಿಂದ 600 ರೂಪಾಯಿ ವಸೂಲಿ ಮಾಡಲಾಗುತ್ತಿದೆ.  ಇದು ದುಪ್ಪಟ್ಟು ದರವಾಗಿದೆ. ಸಾರಿಗೆ ನೌಕರರ ಸಂಘಟನೆಗಳ ಪ್ರತಿನಿಧಿಗಳ ಜತೆ ಮಾತುಕತೆ ಸಾಧ್ಯತೆಯನ್ನು ಸರ್ಕಾರ  ತಳ್ಳಿಹಾಕಿದೆ. ಮುಷ್ಕರವನ್ನು ಸಮರ್ಥವಾಗಿ ಎದುರಿಸುವುದಾಗಿ  ಹೇಳಿದೆ.

 

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!